Slide
Slide
Slide
previous arrow
next arrow

ಶಾಸಕ ಹೆಬ್ಬಾರ್ ಪ್ರಯತ್ನ: ₹41 ಕೋಟಿ ಬೆಳೆ ಹಾನಿ ವಿಮೆ ಜಮಾ

300x250 AD

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಮಧ್ಯವರ್ತಿ ಬ್ಯಾಂಕ್‌ಗೆ 2023 – 24 ನೇ ಸಾಲಿನ ಭತ್ತ ಹಾಗೂ ಗೋವಿನ ಜೋಳದ ಬೆಳೆ ಹಾನಿ ವಿಮೆ ಸುಮಾರು 41 ಕೋಟಿ ರೂಪಾಯಿ ಜಮಾವಾಗಿದೆ ಎಂದು ಕೆ.ಡಿ.ಸಿ.ಸಿ ಬ್ಯಾಂಕ್ ನ ಅಧ್ಯಕ್ಷ ಹಾಗೂ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.

ಕಳೆದ ಸಾಲಿನಲ್ಲಿ ಮುಂಗಾರು ಮಳೆ ಕೊರತೆಯಿಂದ ಭತ್ತ,ಗೋವಿನ ಜೋಳ ಬೆಳೆಗೆ ಹಾನಿಯಾಗಿ ರೈತ ಸಮುದಾಯಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಈ ಬೆಳೆ ವಿಮೆಯ ಬಿಡುಗಡೆಯಿಂದಾಗಿ ಭತ್ತ, ಗೋವಿನ ಜೋಳ ಬೆಳೆದು ಜೀವನ ಜೀವನ ಸಾಗಿಸುತ್ತಿದ್ದ ಹಲವಾರು ರೈತರಿಗೆ ಆರ್ಥಿಕ ಶಕ್ತಿ ಬಂದಂತಾಗಿದೆ.

ವಿಶೇಷವಾಗಿ ಈ ಸಾಲಿನಲ್ಲಿ ಬಿಡುಗಡೆಯಾದ ಬೆಳೆ ಹಾನಿ ವಿಮೆಯಲ್ಲಿ ನನ್ನ ಮತ ಕ್ಷೇತ್ರದ ಯಲ್ಲಾಪುರ ತಾಲೂಕಿಗೆ 84,85,610 ರೂಪಾಯಿ, ಮುಂಡಗೋಡ ತಾಲೂಕಿಗೆ 18,41,53,186 ರೂಪಾಯಿ ಹಾಗೂ ಬನವಾಸಿ ಹೋಬಳಿ ವ್ಯಾಪ್ತಿಯಲ್ಲಿ 15,90,59,753 ರೂಪಾಯಿ ( ಒಟ್ಟು 35 ಕೋಟಿ ರೂಪಾಯಿ ) ರೈತರಿಗೆ ಲಭಿಸಿರುವುದು ಅತ್ಯಂತ ಸಂತಸ ತಂದಿದೆ. ನನ್ನ ಕ್ಷೇತ್ರಕ್ಕೆ ಹೆಚ್ಚಿನ ವಿಮೆ ಪರಿಹಾರವನ್ನು ನೀಡಲು ಸಹಕರಿಸಿದ ಕೃಷಿ ಇಲಾಖೆಯ ಅಧಿಕಾರಿಗೆ, ವಿಮೆ ಕಂಪನಿಯ ಸಿಬ್ಬಂದಿಗಳಿಗೆ ಹಾಗೂ ಸರಕಾರಕ್ಕೆ ಕ್ಷೇತ್ರದ ರೈತರ ಪರವಾಗಿ ಅಭಿನಂದನೆಗಳು.

300x250 AD

ಸರಕಾರದ ಮಟ್ಟದಲ್ಲಿ ವಿಶೇಷ ಪ್ರಯತ್ನವನ್ನು ನಡೆಸಿ ಈ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಹೆಚ್ಚಿನ ಪರಿಹಾರವನ್ನು ಒದಗಿಲಾಗಿದೆ. ವಿಮೆ ಕಂಪನಿಯ ಮಾನದಂಡದ ಅನ್ವಯವಾಗಿ ಉತ್ತರಕನ್ನಡ ಜಿಲ್ಲೆಯ ಭತ್ತ ಹಾಗೂ ಗೋವಿನ ಜೋಳವನ್ನು ಬೆಳೆದ ರೈತರಿಗೆ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ನ ಮೂಲಕವಾಗಿ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿ ರೈತರ ಬ್ಯಾಂಕ್‌ ಖಾತೆಗೆ ಪರಿಹಾರದ ಮೊತ್ತವನ್ನು ನೇರವಾಗಿ ವರ್ಗಾಯಿಸಲಾಗುತ್ತಿದೆ ಎಂದು ತಿಳಿಸಿದರು.

Share This
300x250 AD
300x250 AD
300x250 AD
Back to top