ಕಾರವಾರ: ಪ್ರಸಕ್ತ ಸಾಲಿಗೆ ಮೈಸೂರಿನ ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಮೂರು ವರ್ಷಗಳ ಅವಧಿಗೆ ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ( ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಟರ್ ಅಸಿಸ್ಟೆಂಟ್ಷಿಪ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜನೀಯರಿಂಗ್ ಮತ್ತು ಅನುದಾನ ರಹಿತ ಕೋರ್ಸುಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜನೀಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪರ್ಡ್), ಅಪಾರೇಲ್ ಡಿಸೈನ್ & ಫ್ಯಾಬ್ರಿಕೇಷನ್ ಟೆಕ್ನಾಲಜಿ ಕೋರ್ಸುಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತ ವಿದ್ಯಾರ್ಥಿಗಳು ಕರ್ನಾಟಕ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ 35% ಅಂಕಗಳೊAದಿಗೆ ತೇರ್ಗಡೆ ಹಾಗೂ ಅಂಗವೈಕಲ್ಯತೆ ಲಕ್ಷಣಗಳಾದ ಮೂಳೆ ಮತ್ತು ಕೀಲು ಅಂಕವಿಕಲತೆ 40% ಮತ್ತು ಮೇಲ್ಪಟ್ಟು, ಕಿವುಡು ಮತ್ತು ಮೂಗು ಅಂಕವಿಕಲತೆ 60ಡಿಬಿ ಮತ್ತು ಮೇಲ್ಪಟ್ಟು, ಭಾಗಶಃ ಮತ್ತು ಪೂರ್ಣ ಅಂಧತ್ವ 6/60 ಅಥವಾ 20/200 ಸ್ನೆಲೆನ್-ಕಂಪ್ಯೂಟರ್ ಅಪ್ಲಿಕೇಷನ್ಸ್ (ಫಾರ್ ವಿಜ್ಯುವಲಿ ಇಂಪರ್ಡ್), ಕೋರ್ಸ್ಗೆ ಹೊಂದಿರಬೇಕು.
ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಮತ್ತು ರಾಷ್ಟç ಮಟ್ಟದ ವಿದ್ಯಾರ್ಥಿವೇತನದ ಆರ್ಥಿಕ ಸಹಾಯ ದೊರೆಯುತ್ತದೆ. ಪಾಲಿಟೆಕ್ನಿಕ್ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜೂನ್. 15 ಕೊನೆಯ ದಿನವಾಗಿದೆ ಅರ್ಜಿಯನ್ನು ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆಎಸ್ಎಸ್ ತಾಂತ್ರಿಕ್ ಶಿಕ್ಷಣ ಸಂಸ್ಥೆಗಳ ಸಮುಚ್ಛಯ, ಮೇಸೂರು-570006 ಇಲ್ಲಿಂದ ಪಡೆದು ಅಥವಾ ವೆಬ್ಸೈಟ್ ಮೂಲಕ ಡೌನ್ಲೊಡ್ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.jsspda.org , ಇ-ಮೇಲ್ jsspda@gmail.com ಅಥವಾ ದೂ.ಸಂ: 9844644937 ಗೆ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.