Slide
Slide
Slide
previous arrow
next arrow

ಕುಡಿಯುವ ನೀರಿನ ಮೇಲ್ತೊಟ್ಟಿ ಶುಚಿಗೊಳಿಸಲು ತಾ.ಪಂ ಇಓ ಸೂಚನೆ

300x250 AD

ಅಂಕೋಲಾ: ಮೇ ತಿಂಗಳ ಅಂತ್ಯದೊಳಗಾಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲ ಕುಡಿಯುವ ನೀರಿನ ಮೇಲ್ತೊಟ್ಟಿಗಳನ್ನು ಕಡ್ಡಾಯವಾಗಿ ಶುಚಿಗೊಳಿಸಿ, ಜಿಯೋ ಟ್ಯಾಗ್ ಛಾಯಾಚಿತ್ರಗಳೊಂದಿಗೆ ವರದಿ ಸಲ್ಲಿಸಲು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಎಂ ಸೂಚನೆ ನೀಡಿದರು.

ಅವರು ಮಂಗಳವಾರ ಅಂಕೋಲಾ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ವಿವಿಧ ಯೋಜನೆಗಳ ಕುರಿತ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮುಂಗಾರು ಆರಂಭವಾಗುವ ಮೊದಲು ಕುಡಿಯುವ ನೀರಿನ ಒವರ್ ಹೆಡ್ ಟ್ಯಾಂಕ್‌ಗಳನ್ನು ಶುಚಿಗೊಳಿಸಬೇಕು. ಕುಡಿಯುವ ನೀರಿನ ಖಾಸಗಿ ಮೂಲಗಳಾದ ವೈಯಕ್ತಿಕ ಬಾವಿಗಳು ಸೇರಿದಂತೆ ಎಲ್ಲ ಕುಡಿಯುವ ನೀರಿನ ಮೂಲಗಳಲ್ಲಿ ನಿಯಮಿತವಾಗಿ ನೀರಿನ ಗುಣಮಟ್ಟ ಪರಿಶೀಲನೆ ಆಗಬೇಕು. ವಾಟರ್ ಪೈಪ್ ಲೈನ್ ಸೋರುವಿಕೆ ನಿಯಂತ್ರಿಸಬೇಕು. ಜನತೆಗೆ ಶುದ್ಧ ಕುಡಿಯುವ ನೀರು ಪಡೆಯಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ನರೇಗಾ ಯೋಜನಗೆ ಸಂಬಂಧಿಸಿದಂತೆ ಮಳೆಗಾಲದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಾನವ ದಿನಗಳ ಸೃಜನೆ ಕಷ್ಟವಾದ್ದರಿಂದ ಮಳೆ ಆರಂಭವಾಗುವ ಮೊದಲೇ ನಿಗದಿತ ಗುರಿ ಸಾಧಿಸಲು ಕ್ರಮವಹಿಸಬೇಕು. ಮಹಿಳಾ ಕೂಲಿಕಾರರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು. ಮೊದಲ 5 ಆದ್ಯತೆಯ ಕಾರ್ಯಗಳು, ವರ್ಕ್ ಕಂಪ್ಲೀಷನ್, ಗ್ರಾಮ ಪಂಚಾಯತ್ ಕಟ್ಟಡ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಳೆ ನೀರು ಕೊಯ್ಲು ಘಟಕ ನಿರ್ಮಾಣಕ್ಕೆ ಆದ್ಯತೆ ನೀಡಲು ಸೂಚಿಸಿದರು. ಮುಂದುವರಿದು ವಸತಿ, ಎಸ್‌ಬಿಎಮ್, 15ನೇ ಹಣಕಾಸು, ಮುಖ್ಯಮಂತ್ರಿ ಗ್ರಾಮ ವಿಕಸನ, ಗ್ರಂಥಾಲಯ, ಎಸ್ಕ್ರೋ ಬಿಲ್ ಸೇರಿದಂತೆ ವಿವಿಧ ಪ್ರಮುಖ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ತಾಲೂಕು ಪಂಚಾಯತ್ ಸಹಾಯಕ ಲೆಕ್ಕಾಧಿಕಾರಿ ಶ್ರೀಮಂತಿ ನಾಯ್ಕ, ಎಲ್ಲ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ನರೇಗಾ ತಾಂತ್ರಿಕ, ಐಇಸಿ ಸಂಯೋಜಕರು, ಅಭಿಯಂತರರು, ತಾಲೂಕು ಪಂಚಾಯತ್ ಸಿಬ್ಬಂದಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಭಾಗವಹಿಸಿದ್ದರು.

300x250 AD
Share This
300x250 AD
300x250 AD
300x250 AD
Back to top