Slide
Slide
Slide
previous arrow
next arrow

ವಿದ್ಯಾರ್ಥಿಗಳಿಗೆ ರಿಯಾಯತಿ ದರದಲ್ಲಿ ಬಸ್ ಪಾಸ್ ವಿತರಣೆ

300x250 AD

ಕಾರವಾರ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗ, ಧಾರವಾಡ, ಗದಗ, ಬಾಗಲಕೋಟ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬೆಳಗಾವಿ, ವಿಭಾಗಗಳ ವ್ಯಾಪ್ತಿಯ ಕರ್ನಾಟಕ ಒನ್ ಕೇಂದ್ರಗಳಲ್ಲಿ ಹಾಗೂ ಪ್ರಮುಖ ಬಸ್ ನಿಲ್ದಾಣಗಳ ಪಾಸ್ ಕೌಂಟರ್ಗಳಲ್ಲಿ ಜೂನ್ 1 ರಿಂದ ಬಸ್ ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
2024-25ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಸೇವಾಸಿಂಧು ಆನ್ಲೈನ್ ಪೋರ್ಟಲ್ (https://sevasindhuservices.karnataka.gov.in/) ಮುಖಾಂತರ ಅರ್ಜಿ ಸಲ್ಲಿಸಿ, ಸಂಸ್ಥೆಯು ನಿಗದಿ ಪಡಿಸಿದ ಬಸ್ ಪಾಸ್ ಕೌಂಟರ್ಗಳಲ್ಲಿ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಉಚಿತ ಹಾಗೂ ರಿಯಾಯಿತಿ ಬಸ್ ಪಾಸ್‌ಗಳನ್ನು ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಸದರಿ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top