ಸಿದ್ದಾಪುರ: 2023_24ನೇ ಸಾಲಿನ ಇನ್ಸ್ಪೆರ್ ಅವಾರ್ಡ್ ಸ್ಪರ್ಧೆಯ ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ತಾಲೂಕಿನ ಐಗೋಡದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಚಂದನಾ ಕುಮಾರ ನಾಯ್ಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವಳಿಗೆ ಶಾಲೆಯ ಶಿಕ್ಷಕಿ ಮಮತಾ ಕೆ. ಪಿ. ಮಾರ್ಗದರ್ಶನ ನೀಡಿದ್ದು, ಇವರ ಮಾರ್ಗದರ್ಶನದಲ್ಲಿ ಸತತವಾಗಿ ನಾಲ್ಕು ವರ್ಷ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ. ಮುಖ್ಯಶಿಕ್ಷಕರು ಮತ್ತು ಶಿಕ್ಷಕವೃಂದ, ಎಸ್.ಡಿ.ಎಂ.ಸಿ. ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಕುಟುಂಬಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.