ದಾಂಡೇಲಿ : ನಗರದ ಟೌನ್ ಶಿಪ್ನ ಶ್ರೀ ರಾಘವೇಂದ್ರ ಮಠದ ಹತ್ತಿರದಲ್ಲಿರುವ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ನಾಯ್ಕಅವರ ಮನೆಯ ಎದುರಿನ ರಸ್ತೆಯ ಬದಿಯಲ್ಲಿ ನಿಲ್ಲಿಸಿಟ್ಟಿದ್ದ ದ್ವಿಚಕ್ರ ವಾಹನದ ಮೇಲೆ ವಿದ್ಯುತ್ ಕಂಬವೊಂದು ಮುರಿದು ಬಿದ್ದು, ವಾಹನ ಜಖಂಗೊಂಡಿದೆ.
ನಗರದ ಸಾರ್ವಜನಿಕ ಆಸ್ಪತ್ರೆಯ ಆಂಬುಲೆನ್ಸ್ ಚಾಲಕ ಉಸ್ಮಾನ್ ಹೈದರ್ ಶೇಖ ಎಂಬವರು ತನ್ನ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಹೋದ ಒಂದೆರಡು ನಿಮಿಷದಲ್ಲೇ ವಿದ್ಯುತ್ ಕಂಬ ಉರುಳಿ ಬಿದ್ದಿದೆ. ಬೆಳಿಗ್ಗೆ ಆಗಿರುವ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಒಂದು ವೇಳೆ ಸಂಜೆಯ ಸಮಯದಲ್ಲಿ ಈ ಘಟನೆ ನಡೆಯುತ್ತಿದ್ದರೇ ಸ್ಥಳೀಯ ಮಕ್ಕಳು ರಸ್ತೆ ಬದಿಯಲ್ಲಿ ಆಟವಾಡುತ್ತಿರುವ ಸಾಧ್ಯತೆಯಿದ್ದ ಕಾರಣಕ್ಕೆ ಅನಾಹುತ ನಡೆಯುವ ಸಂಭವವಿತ್ತು ಎಂಬ ಮಾತುಗಳು ಕೇಳಿಬಂದಿವೆ. ಆದರೆ ಅದೃಷ್ಟವಶಾತ್ ಈ ಘಟನೆಯ ಸಂದರ್ಭದಲ್ಲಿ ಸ್ಥಳದಲ್ಲಿ ಯಾರು ಇಲ್ಲದಿದ್ದ ಪರಿಣಾಮವಾಗಿ ಆಗಬಹುದಾದ ಅನಾಹುತವೊಂದು ತಪ್ಪಿದಂತಾಗಿದೆ.