ದಾಂಡೇಲಿ : ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷರಾಗಿ ನಗರದ ಕಾಂಗ್ರೆಸ್ ಮುಖಂಡ ರಾಜಶೇಖರ ನಿಂಬಾಳ್ಕರ್ ಅವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗದ ಸಹ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿ ವಿಜಯ ಮತ್ತಿಕಟ್ಟಿ ಅವರು ರಾಜಶೇಖರ ನಿಂಬಾಳ್ಕರ್ ಅವರಿಗೆ ಈ ನೇಮಕಾತಿ ಆದೇಶವನ್ನು ನೀಡಿದ್ದಾರೆ. ಇವರ ನೇಮಕದ ಕುರಿತಂತೆ ಸಲ್ಲಿಸಲಾದ ಪ್ರಸ್ತಾವನೆಗೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಅನುಮೋದಿಸಿರುವುದನ್ನು ನೇಮಕಾತಿ ಆದೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರಾಜಶೇಖರ ನಿಂಬಾಳ್ಕರ್ ಅವರು ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದು, ನಗರದ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ.