ಶಿರಸಿ: ತಾಲೂಕಿನ ಕುಳವೆ ಗ್ರಾಮ ಪಂಚಾಯತ ವ್ಯಾಪ್ತಿಯ ಕೆಂಚಗದ್ದೆ ಕಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಭೀಮಣ್ಣ ನಾಯ್ಕ ಭೇಟಿ ನೀಡಿ, ಶಿಥಿಲಗೊಂಡಿರುವ ಶಾಲಾ ಕಟ್ಟಡವನ್ನು ವೀಕ್ಷಿಸಿದರು.
ಇತ್ತೀಚಿನ ಮಳೆಗೆ ಶಾಲೆಯ ಒಂದು ಕಟ್ಟಡ ಸಂಪೂರ್ಣ ಶಿಥಿಲಗೊಂಡು ಬೀಳುವ ಹಂತಕ್ಕೆ ತಲುಪಿದೆ. ಇದರಿಂದ ಅಲ್ಲಿನ ಮಕ್ಕಳನ್ನು ಪಕ್ಕದಲ್ಲಿರುವ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕರು ಸ್ಥಳಕ್ಕೆ ಭೇಟಿ ನೀಡಿ ತಾತ್ಕಾಲಿಕ ಪರಿಹಾರ ಮಾಡಲು ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದರು. ಬಳಿಕ ತಮ್ಮ ಅನುದಾನದಲ್ಲಿ ಶಾಲೆಗೆ ಹೊಸ ಕಟ್ಟಡ ನೀಡುವುವುದಾಗಿ ಭರವಸೆ ನೀಡಿದರು. ಬಳಿಕ ಶಾಲಾ ಅಭಿವೃದ್ಧಿ ಸಮಿತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕುಳವೆ ಗ್ರಾಪಂ ಅಧ್ಯಕ್ಷೆ ರಂಜಿತಾ ಹೆಗಡೆ, ಸದಸ್ಯ ಸಂದೇಶ ಭಟ್ ಬೆಳಖಂಡ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಶಾಂತ ಹೆಗಡೆ, ಗ್ರಾಮಸ್ಥರಾದ ರವಿ ಹೆಗಡೆ, ಭರತ್ ಹೆಗಡೆ, ನಾಗೇಶ ಹೆಗಡೆ, ಉಲ್ಲಾಸ್ ರಾಯ್ಕರ್ ಮತ್ತು ಶಾಲಾ ಶಿಕ್ಷಕರು, ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.