ಶಿರಸಿ: ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಗೆ ವಿದ್ಯುತ್ ಶಾರ್ಟ ಸರ್ಕ್ಯೂಟ್ನಿಂದಾಗಿ ಬೆಂಕಿ ಹೊತ್ತಿ ಮನೆಯ ಮೇಲ್ಬಾಗದ ಚಾವಣಿಯ ಜಿಮ್ ಮಾಡುವ ಕೊಠಡಿಯ ವಸ್ತುಗಳು ಸುಟ್ಟುಹೋದ ಘಟನೆ ನಡೆದಿದೆ.
ನಗರದ ಕೆಎಚ್ಬಿ ಕಾಲೋನಿಯಲ್ಲಿ ಇರುವ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಮನೆಯಿದ್ದು ಮನೆಯ ಮೇಲ್ಬಾಗದ ಜಿಮ್ ಮಾಡುವ ಕೊಠಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಜಿಮ್ ಯಂತ್ರಗಳಿಗೆ ಬೆಂಕಿ ತಗುಲಿದ್ದು, ಅಂದಾಜು 50 ಸಾವಿರದಷ್ಟು ಹಾನಿಯಾಗಿರಬಹುದು ಎಂದು ಅಂದಾಜಿಸಲಾಗಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು ಯಾವುದೇ ಹೆಚ್ಚಿನ ಹಾನಿಯಾಗಿಲ್ಲ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಸುನೀಲ್ ಮಾಹಿತಿ ನೀಡಿದ್ದಾರೆ.