ಶಿರಸಿ: “ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ದಿನ”ದ ಅಂಗವಾಗಿ ಶಿರಸಿಯ ಲಯನ್ಸ್ ಭವನದಲ್ಲಿ ಲಯನ್ಸ ಕ್ಲಬ್ ಶಿರಸಿ ಹಾಗೂ ಶ್ರೀ ಫೌಂಡೇಶನ್ ಶಿರಸಿ ಇವುಗಳ ಜಂಟಿ ಸಹಯೋಗದಲ್ಲಿ ಅರ್ಥಪೂರ್ಣ ಕಾರ್ಯಕ್ರಮ ನಡೆಯಿತು.
ಲಯನ್ಸ್ ಶಾಲಾ ಮಕ್ಕಳಿಗೆ ಪ್ಲಾಸ್ಟಿಕ್ ಬಳಕೆಯಿಂದ ಪರಿಸರಕ್ಕೆ ಆಗುವ ಹಾನಿ ಹಾಗೂ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮಕ್ಕಳಿಗೆ ಹಾಗೂ ಶಿಕ್ಷಕ ಸಿಬ್ಬಂದಿಗಳಿಗೆ ಮರುಬಳಕೆ ಮಾಡಬಹುದಾದ ಕೈಚೀಲಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಿರಸಿ ಲಯನ್ಸ್ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು, ಲಿಯೋಕ್ಲಬ್ ಶಿರಸಿಯ ಪದಾಧಿಕಾರಿಗಳು ಹಾಗೂ ಸದಸ್ಯರು, ಶ್ರೀ ಫೌಂಡೇಶನ್ ಸಂಸ್ಥೆಯ ಪದಾಧಿಕಾರಿಗಳು ಭಾಗವಹಿಸಿದ್ದರು.