ಜೋಯಿಡಾ:ತಾಲೂಕಿನ ರಾಮನಗರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಿಂದೋಳಿ ಶಾಲೆಯಲ್ಲಿ ಅರಣ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಅರಣ್ಯ ಇಲಾಖೆಯ ಅರಣ್ಯ ರಕ್ಷಕರಾದ ಪಕೀರಪ್ಪ ಮತ್ತು ಪ್ರಶಾಂತರವರು ವನಮಹೋತ್ಸವದ ಕಾರ್ಯಕ್ರಮ ಉದ್ದೇಶ, ಪ್ರಯೋಜನಗಳ ಕುರಿತು ಸಂದರ್ಭೋಚಿತವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲೆಯ ಮುಖ್ಯ ಶಿಕ್ಷಕರಾದ ಅನಿಲ ರಾಠೋಡ ಮಾತನಾಡಿ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಮಾಡುತ್ತಿರುವುದು ಸಂತಸದ ವಿಷಯ, ಇಂತಹ ಕಾರ್ಯಕ್ರಮಗಳನ್ನು ನಡೆಸುವುದರಿಂದ ಮಕ್ಕಳಿಗೆ ಪರಿಸರ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಲು ಅನುಕೂಲವಾಗುತ್ತದೆ ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಶಾಲಾ ಆಡಳಿತ ಮಂಡಳಿ ಪದಾಧಿಕಾರಿಗಳು, ಸಹ ಶಿಕ್ಷಕರಾದ ಮಹೇಶ ಮಳಿಕ,ಆನಂದ ಪಿ.ಅಂಗನವಾಡಿ ಕಾರ್ಯಕರ್ತೆ ಶ್ವೇತಾ ಗಾಂವಕರ, ಪಾಲಕರು, ಪೋಷಕರು ಉಪಸ್ಥಿತರಿದ್ದರು.