Slide
Slide
Slide
previous arrow
next arrow

ಮಕ್ಕಳಿಗೆ ಕೃಷಿ ಪಾಠ: ಗದ್ದೆಗಿಳಿದು ಭತ್ತದ ಸಸಿ ನಾಟಿ ಮಾಡಿದ ವಿದ್ಯಾರ್ಥಿಗಳು

300x250 AD

ಭಟ್ಕಳ: ತರಗತಿಯಲ್ಲಿ ಪಾಠ ಮಾಡುವುದಕ್ಕಿಂತ, ಪ್ರಾಯೋಗಿಕವಾಗಿ ತೋರ್ಪಡಿಸುವುದರಿಂದ ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ ಮನದಟ್ಟು ಮಾಡಲು ಸಾಧ್ಯ ಎಂಬ ಆಶಯದೊಂದಿಗೆ ಭಟ್ಕಳ ವಿದ್ಯಾ ಭಾರತಿ ಇಂಗ್ಲಿಷ ಮೀಡಿಯಂ ಶಾಲಾ ವಿದ್ಯಾರ್ಥಿಗಳಿಗೆ ಗದ್ದೆಯಲ್ಲಿ ಭತ್ತದ ನಾಟಿ ಮಾಡಿಸುವ ಮೂಲಕ ಕೃಷಿ ಶಿಕ್ಷಣವನ್ನು ನೀಡಲಾಯಿತು

ಭಟ್ಕಕ ಎಜುಕೇಶನ್ ಟ್ರಸ್ಟ್ ವಿದ್ಯಾಭಾರತಿ ಇಂಗ್ಲಿಷ್ ಸ್ಕೂಲ್ ಹಾಗೂ ಕ್ರಿಯಾಶೀಲ ಗೆಳೆಯರ ಬಳಗ ಭಟ್ಕಳ ವತಿಯಿಂದ ಇಲ್ಲಿನ ವಿ.ಟಿ ರಸ್ತೆಯಲ್ಲಿನ ಜಂಬೂರ್ ಮಠದಲ್ಲಿರುವ ಗದ್ದೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಕೃಷಿ ಅಧಿಕಾರಿ ಮೇಘನ ಖಾರ್ವಿ ಉದ್ಗಾಟಿಸಿದರು.

ಶಾಲೆಗಳಲ್ಲಿ ಸಾಮಾನ್ಯವಾಗಿ ಆಟ – ಪಾಠದ ಜತೆಗೆ ಕೆಲ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದು ಸಾಮಾನ್ಯ. ಆದರೆ, ಭಟ್ಕಳ ತಾಲೂಕಿನ ಶಾಲೆಯೊಂದರಲ್ಲಿ ಮಕ್ಕಳನ್ನು ಗದ್ದೆಗೆ ಇಳಿಸಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸುವ ಮೂಲಕ ವಿಭಿನ್ನವಾಗಿ ಪಾಠ ಮಾಡಲಾಗಿದೆ.ನಾಲ್ಕು ಗೋಡೆಗಳ ಮಧ್ಯೆ ಪಾಠ ಕೇಳುತ್ತಾ ತಲ್ಲೀನರಾಗುತ್ತಿದ್ದ, ತಾಲೂಕಿನ ವಿದ್ಯಾಭಾರತಿ ಇಂಗ್ಲಿಷ್ ಮೀಡಿಯಂ ಶಾಲಾ ಮಕ್ಕಳಿಗೆ ಗದ್ದೆ ಎಂದರೆ ಏನು?, ಬೇಸಾಯ ಎಂದರೆ ಹೇಗೆ?, ನಾಟಿ ಹೇಗೆ ಮಾಡಬೇಕು ಎಂದೆಲ್ಲ ಮಾಹಿತಿ ನೀಡುತ್ತಾ ಮಕ್ಕಳನ್ನು ಕೃಷಿ ಚಟುವಟಿಕೆಯಲ್ಲಿ ತೊಡಗಿಸಲಾಗಿತ್ತು. ಮಕ್ಕಳು ಮಳೆಯನ್ನು ಲೆಕ್ಕಿಸದೇ ಉತ್ಸುಕತೆಯಲ್ಲಿ ಪಾಲ್ಗೊಂಡು ಗದ್ದೆಯಲ್ಲಿ ನಾಟಿ ಮಾಡುವುದು ಎಲ್ಲರ ಗಮನ ಸೆಳೆಯಿತು.

ಈ ಬಗ್ಗೆ ಮಾತನಾಡಿದ ವಿದ್ಯಾಭಾರತಿ ಇಂಗ್ಲಿಷ್ ಮೀಡಿಯಂ ಮುಖ್ಯ ಶಿಕ್ಷಕರಾದ ರೂಪಾ ಖಾರ್ವಿ ಮಾತನಾಡಿ ವಿದ್ಯಾಭಾರತಿ ಸ್ಕೂಲ್ ಯಾವಾಗಲೂ ವಿಶೇಷ ಕಾರ್ಯಕ್ರಮಗಳಿಂದ ಗುರುತಿಸಿಕೊಂಡು ಬಂದಿದ್ದೇವೆ. ನಮ್ಮ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜೊತೆಯಲ್ಲಿ ನೈತಿಕ ಮೌಲ್ಯವನ್ನು ಹೇಳುಕೊಡುತ್ತಿದ್ದೇವೆ. ಇಂದಿನ ಮಕ್ಕಳಿಗೆ ಗದ್ದೆ ಎಂದರೆ ಏನು ಎನ್ನುವುದು ತಿಳಿದಿಲ್ಲ. ಹೊಟೇಲಗಳಿಗೆ ಹೋದ ವೇಳೆ ಅರ್ಧ ತಿಂದು ಅರ್ಧ ಅಲ್ಲೇ ಬಿಟ್ಟು ಬರುತ್ತಿದ್ದಾರೆ. ಅವರಿಗೆ ಅನ್ನದ ಮೌಲ್ಯ ತಿಳಿದಿಲ್ಲ. ನಾವು ಊಟ ಮಾಡುವ ಅಕ್ಕಿಯನ್ನು ಹೇಗೆ ಕಷ್ಟಪಟ್ಟು ಮಾಡುತ್ತಾರೆ ಎನ್ನುವ ಪರಿಜ್ಞಾನವಿಲ್ಲ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಪಾಠದಲ್ಲಿ ಕೃಷಿ ಚಟುವಟಿಕೆಯ ಕುರಿತು ಮೌಖಿಕವಾಗಿ ಹೇಳುವುದಕ್ಕಿಂತ ಪ್ರಾಯೋಗಿಕವಾಗಿ ತೋರ್ಪಡಿಸಿದರೆ ವಿದ್ಯಾರ್ಥಿಗಳು ವಾಸ್ತವತೆ ಅರಿಯಲು ಸಾಧ್ಯವಾಗುತ್ತದೆ ಎಂದರು.

300x250 AD

ಈ ವೇಳೆ ಮಕ್ಕಳು ವಿಶೇಷ ಬಟ್ಟೆ ತೊಟ್ಟು ಗದ್ದೆಗಿಳಿದು ನಾಟಿ ಮಾಡುವುದರ ಮೂಲಕ ಎಲ್ಲರ ಗಮನ ಸೆಳೆದರು. ಇದರ ಜೊತೆಯಲ್ಲಿ ಶಾಲಾ ಶಿಕ್ಷಕರು ಹಾಗೂ ಕ್ರಿಯಾಶೀಲ ಗೆಳೆಯ ಬಳಗದವರು ಕೂಡ ಗದ್ದೆ ನಾಟಿ ಮಾಡಿದರು.

ಈ ಸಂದರ್ಭದಲ್ಲಿ ಕ್ರಿಯಾಶೀಲ ಗೆಳೆಯ ಬಳಗದ ಅಧ್ಯಕ್ಷರಾದ ದೀಪಕ ನಾಯ್ಕ, ರಮೇಶ ಖಾರ್ವಿ, ಶ್ರೀಕಾಂತ ನಾಯ್ಕ , ಮಣಿ ನಾಯ್ಕ ಮುಂತಾದವರು‌ ಹಾಜರಿದ್ದರು.

Share This
300x250 AD
300x250 AD
300x250 AD
Back to top