ಸಿದ್ದಾಪುರ: ತಾಲೂಕಿನ ಕ್ಯಾದಗಿ ವಲಯದ ಹಳ್ಳಿಬೈಲ್ನಲ್ಲಿ ಪ್ರಗತಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು . ಈ ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷೆ ಕಲಾವತಿ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಹಾಗೂ ಒಕ್ಕೂಟದ ಅಧ್ಯಕ್ಷರು ಮಾರುತಿ ಉಪಸ್ಥಿತರಿದ್ದರು.
ವಲಯದ ಮೇಲ್ವಿಚಾರಕರಾದ ಕೃಷ್ಣ ಮೇಸ್ತ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪ್ರಸ್ತಾವಿಕ ಮಾತನಾಡಿ ಆಡು ಮುಟ್ಟದ ಸೊಪ್ಪಿಲ್ಲ ಗ್ರಾಮಾಭಿವೃದ್ಧಿ ಯೋಜನೆ ಮಾಡದ ಕೆಲಸವಿಲ್ಲ ಎನ್ನುವ ಮುಖಾಂತರ ಯೋಜನೆಯ ಕಿರುಪರಿಚಯ ಹಾಗೂ ಯೋಜನೆ ಸೌಲಭ್ಯಗಳ ಬಗ್ಗೆ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮ, ಮಧ್ಯವರ್ಜನ ಶಿಬಿರ, ಜ್ಞಾನದೀಪ ಶಿಕ್ಷಕರು ಸುಜ್ಞಾನ ನಿಧಿ ಕಾರ್ಯಕ್ರಮ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಪುಷ್ಪಲತಾ ಆರೋಗ್ಯದ ಕುರಿತು ಮಾಹಿತಿ ನೀಡಿ ಆರೋಗ್ಯವೇ ಭಾಗ್ಯ. ಆರೋಗ್ಯಕರ ಆಹಾರ, ಹಸಿ ತರಕಾರಿ ಮೊಳಕೆ ಕಾಳುಗಳು ಸೇವಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆರೋಗ್ಯದ ವಿಷಯದಲ್ಲಿ ಮನೆಯ ಮದ್ದಿಗೆ ಮೊದಲ ಆದ್ಯತೆ ನೀಡಬೇಕು. ಸ್ವಚ್ಛತೆ ಕಾಪಾಡುವುದು, ಆರೋಗ್ಯದ ಬಗ್ಗೆ ಮಾಹಿತಿ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದ ಸದಸ್ಯರಿಗೆ ಬಹುಮಾನವನ್ನು ವಿತರಿಸಲಾಯಿತು ಹಾಗೂ ಸೇವಾ ಪ್ರತಿನಿಧಿ ಗಾಯತ್ರಿ ಸ್ವಾಗತಿಸಿದರೆ, ಲಿಖಿತಾ ಧನ್ಯವಾದಗಳನ್ನು ಕೋರಿದರು. ಜ್ಞಾನ ವಿಕಾಸ ಸಮನ್ವಯಧಿಕಾರಿ ಲಲಿತಾ ಕಾರ್ಯಕ್ರಮವನ್ನು ನಿರೂಪಿಸಿದರು.