ಶಿರಸಿ: ಇಲ್ಲಿನ ಚಂದನ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರದ ಕುರಿತು ವಿಶೇಷ ಕಾರ್ಯಾಗಾರವನ್ನು ಡಾ|| ಅಶ್ವತ ಹೆಗಡೆ ಅವರಿಂದ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರು ಹಾಗೂ ಕಾರ್ಯದರ್ಶಿಗಳು ಆದ ಎಲ್.ಎಮ್.ಹೆಗಡೆ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಹಲವಾರು ಮನಸ್ಸಿಗೆ ಸಂಬಂಧಪಟ್ಟ ಏಕಾಗ್ರತೆ, ವ್ಯಾಕುಲತೆ, ಆತಂಕ ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿದ್ದು ಅವುಗಳನ್ನು ಬಗೆ ಹರಿಸುವುದಕ್ಕಾಗಿ ಡಾ. ಆಶ್ವತ ಹೆಗಡೆ ಅವರನ್ನು ಕರೆಸಲಾಗಿದೆ. ಕಾರ್ಯಕ್ರಮದ ಸುದುಪಯೋಗವನ್ನು ಪಡೆದು ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ತಿಳಿಸಿದರು.
ಡಾ.ಅಶ್ವತ ಹೆಗಡೆ ಮಾತನಾಡಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳಿಂದ ಹೊರಬರಲಾರದೆ , ಶೈಕ್ಷಣಿಕವಾಗಿ ಹಿಂದುಳಿಯುವ ಪ್ರಸಂಗ ಎದುರಾಗುತ್ತಿದೆ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಅರಿತು ಸೂಕ್ತ ಪರಿಹಾರ ನೀಡಿದ್ದಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕವಾಗಿಯು ದೈಹಿಕವಾಗಿಯು & ಮಾನಸಿಕ ವಾಗಿಯೂ ಉತ್ತಮ ಸ್ಥಿತಿಯಲ್ಲಿರುತ್ತಾರೆ ಎಂದು ಹೇಳಿದರು.
ಪ್ರಾಚಾರ್ಯರಾದ ಡಾ.ಆರ್.ಎಮ್.ಭಟ್ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಈ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.