Slide
Slide
Slide
previous arrow
next arrow

ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ: ಸಂಸದ ಕಾಗೇರಿ

300x250 AD

ಕಾರವಾರ: ಕಾರವಾರ ಸೀ ಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡು ಬರುವ ಕೃತಕ ನೆರೆಯನ್ನು ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪ್ರತೀ ಮಳೆಗಾಲದಲ್ಲಿ ಸೀ ಬರ್ಡ್ ನೌಕಾನೆಲೆ ಬಳಿಯ ರಾಷ್ಟ್ರೀಯ ಹೆದ್ದಾರಿ ಬಳಿ ಗುಡ್ಡದಿಂದ ಬರುವ ನೀರು ಸರಾಗವಾಗಿ ಹರಿದು ಸಮುದ್ರ ಸೇರಲು ಇರುವ ಅಡೆತಡೆಗಳನ್ನು ಶಾಶ್ವತವಾಗಿ ನಿವಾರಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು, ಸೀ ಬರ್ಡ್ ಮತ್ತು ನೌಕಾನೆಲೆ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮಳೆ ಕಡಿಮೆಯಾದ ಕೂಡಲೇ ಆ ಪ್ರದೇಶಕ್ಕೆ ಭೇಟಿ ನೀಡಿ ಅಗತ್ಯ ಮಾರ್ಗೋಪಾಯಗಳನ್ನು ಕಂಡುಕೊಂಡು ಅವುಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದ ಸಂಸದರು , ನೌಕಾನೆಲೆಯ ಅಧಿಕಾರಿಗಳು ಜಿಲ್ಲಾಡಳಿತದ ಈ ಯೋಜನೆಗಳಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದರು.

300x250 AD

ಜಿಲ್ಲೆಯಲ್ಲಿ ಕಾರವಾರದಿಂದ ಭಟ್ಕಳದವರೆಗಿನ ರೈಲು ಮಾರ್ಗದಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಕಾಮಗಾರಿಗಳು ಮತ್ತು ಪ್ರಯಾಣಿಕರ ಹಿತದೃಷ್ಠಿಯಿಂದ ಕೈಗೊಳ್ಳಬೇಕಾಗಿರುವ ಸುಧಾರಣಾ ಕ್ರಮಗಳು ಹಾಗೂ ರೂಪಿಸಬಹುದಾದ ಯೋಜನೆಗಳ ಕುರಿತ ವಿವರವಾದ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಕೊಂಕಣ ರೈಲ್ವೆಯ ಅಧಿಕಾರಿಗಳಿಗೆ ಸೂಚಿಸಿದ ಸಂಸದರು, ಜಿಲ್ಲೆಯಲ್ಲಿ ರೈಲ್ವೆಗೆ ಸಂಬಂಧಪಟ್ಟ ಯೋಜನೆಗಳನ್ನು ಅಭಿವೃಧ್ದಿಪಡಿಸುವ ಕುರಿತಂತೆ ರೈಲ್ವೆ ಖಾತೆಯ ಸಚಿವರೊಂದಿಗೆ ಚರ್ಚಿಸಿ ಅವುಗಳ ಸಂಪೂರ್ಣ ಅನುಷ್ಠಾನಕ್ಕೆ ಪ್ರಯತ್ನಿಸುವುದಾಗಿ ತಿಳಿಸಿದರು. ಕೊಂಕಣ ರೈಲ್ವೆಗೆ ಸಂಬಂಧಪಟ್ಟಂತೆ ಬಾಕಿ ಇರುವ ಭೂ ಸ್ವಾಧೀನ ಪ್ರಕರಣಗಳ ಪರಿಹಾರದ ಮೊತ್ತವನ್ನು ಸಂತ್ರಸ್ಥರಿಗೆ ಶೀಘ್ರದಲ್ಲಿ ಪಾವತಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವವರಿಗೆ ವೈದ್ಯಕೀಯ ನೆರವಿನೊಂದಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ತಿಳಿಸಿದ ಅವರು, ವಿಕೋಪ ಸಂದರ್ಭದಲ್ಲಿ ಎಲ್ಲಾ ಅಧಿಕಾರಿಗಳು ಸಿಬ್ಬಂದಿಗಳು ಸೇವಾ ಮನೋಭಾವ ಮತ್ತು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಬೇಕು, ಸಂಬಂಧಪಟ್ಟ ಇಲಾಖೆಗಳು ವಿಪತ್ತು ಎದುರಿಸಲು ಅಗತ್ಯವಿರುವ ಎಲ್ಲಾ ಸಿದ್ದತೆಗಳೊಂದಿಗೆ ಸದಾ ಜಾಗರೂಕರಾಗಿರಬೇಕು ಎಂದರು.
     ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ ಕಾಂದೂ, ಎಸ್ಪಿ ನಾರಾಯಣ್, ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಸೀ ಬರ್ಡ್, ನೌಕಾನಲೆ, ರೈಲ್ವೆ, ರಾಷ್ಟ್ರೀಯ ಹೆದ್ದಾರಿ ಮತ್ತಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Share This
300x250 AD
300x250 AD
300x250 AD
Back to top