Slide
Slide
Slide
previous arrow
next arrow

ಗ್ಯಾಸ್ ಟ್ಯಾಂಕರ್ ಸೋರಿಕೆ ಸಾಧ್ಯತೆ :ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಿ

300x250 AD

ಕಾರವಾರ: ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಮಳೆಯಿಂದ ಅಂಕೋಲಾ ತಾಲ್ಲೂಕಿನ ವಾಸರಕುದ್ರಿಗೆ ಗ್ರಾಮ ಪಂಚಾಯತ ಶಿರೂರು ಗ್ರಾಮದಲ್ಲಿ ಭೂಕುಸಿತ ಸಂಭವಿಸಿದೆ.

ಸದರಿ ಭೂ ಕುಸಿತದಲ್ಲಿ ಎರಡು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಯಲ್ಲಿ ಉರುಳಿ ಬಿದ್ದಿದ್ದು, ಸದರಿ ಗ್ಯಾಸ್ ಟ್ಯಾಂಕರ್‌ಗಳು ಸೋರಿಕೆಯಾಗುವ ಸಾಧ್ಯತೆ ಇರುವುದರಿಂದ, ನದಿ ದಡದಲ್ಲಿರುವ ಮನೆಗಳಲ್ಲಿ ವಾಸವಿರುವ ಸಾರ್ವಜನಿಕರು, ಕುಟುಂಬಸ್ಥರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವುದು ಅವಶ್ಯಕವಾಗಿದೆ. ಆದ್ದರಿಂದ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ನಿರೀಕ್ಷಕರು ಹಾಗೂ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರು, ಸಹಾಯಕ ಆಯುಕ್ತರು ಕೂಡಲೇ ಮುನ್ನೆಚರಿಕೆ ಕ್ರಮವಾಗಿ ನದಿ ದಡದಲ್ಲಿರುವ ಎಲ್ಲಾ ಮನೆಗಳಲ್ಲಿರುವ ಕುಟುಂಬದ ಸದಸ್ಯರನ್ನು ಸುರಕ್ಷಿತ ಸ್ಥಳಗಳಾದ ಕಾಳಜಿ ಕೇಂದ್ರದಲ್ಲಿ ಸ್ಥಳಾಂತರಿಸಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲು ಮತ್ತು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತಿಳಿಸಲಾಗಿದೆ.
ಎಲ್ಲಾ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅದ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top