ಕಾರವಾರ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಕುಮಟಾದ ವತಿಯಿಂದ ಜು.22 ರಿಂದ ಆ.3ರ ವರೆಗೆ 13 ದಿನಗಳ ಕೃತಕ ಆಭರಣ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು. ಹಾಗೂ ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು ಬರೆಯಲು ಬರಬೇಕು. ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು. ತರಬೆತಿಯಲ್ಲಿ ವಿವಿಧ ರೀತಿಯ ಸರಗಳು, ಬಳೆಗಳು, ನೆಕ್ಲೇಸ್, ಕಿವಿ ಓಲೆ, ಹವಳದ ಸರಗಳು ಮುಂತಾದ ಕೃತಕ ಆಭರಣಗಳನ್ನು ಕಲಿಸಲಾಗುವುದು.
ಆಸಕ್ತರು ತರಬೇತಿಗೆ ಬರುವಾಗ 4 ಪಾಸ್ಪೋರ್ಟ ಸೈಜ್ ಫೋಟೋ, ರೇಶನ ಕಾರ್ಡ, ಆಧಾರ್ ಕಾರ್ಡ, ಬ್ಯಾಂಕ್ ಪಾಸ್ಬುಕ್, ಪಾನ್ಕಾರ್ಡ್ ಇವುಗಳ 1 ಝೆರಾಕ್ಸ್ ಪ್ರತಿಯನ್ನು ತರಬೇಕು. ಈ ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗ ಕೈಗೊಳ್ಳಬಹುದಾಗಿದೆ.
ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಇಂಡಸ್ಟ್ರಿಯಲ್ ಏರೀಯಾ, ಹೆಗಡೆ ರಸ್ತೆ, ಕುಮಟಾ -581343 ಉತ್ತರ ಕನ್ನಡ ಜಿಲ್ಲೆ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ದೂರವಾಣಿ ಸಂಖ್ಯೆTel:+919449860007,Tel:+919538281989,Tel:+919916783825,Tel:+918880444612,Tel:+919620962004, ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ ಎಂದು ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.