Slide
Slide
Slide
previous arrow
next arrow

ರೈತ ಮಹಿಳೆಯರಲ್ಲಿ ಹೈನುಗಾರಿಕೆ ಪ್ರೋತ್ಸಾಹಿಸಲು ಸಹಾಯಧನ

300x250 AD

ಕಾರವಾರ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರೈತ ಮಹಿಳೆಯರಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಲು ಹಸು ಮತ್ತು ಎಮ್ಮೆ ಖರೀದಿಗೆ ಪಡೆಯುವ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದಲೇ ಶೇ. 6 ರ ಬಡ್ಡಿ ಸಹಾಯಧನ ನೀಡಲಾಗುವುದು.
ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆಗಾಗಿ ವಿವಿಧ ಬ್ಯಾಂಕ್‌ಗಳಲ್ಲಿ ಸಾಲ ಪಡೆಯುವ ಪ್ರತಿ ಫಲಾನುಭವಿಗೆ ಗರಿಷ್ಠ ರೂ 65,000 ಸಾಲದ ಮೊತ್ತಕ್ಕೆ ಶೇ.6 ರ ಬಡ್ಡಿ ಸಹಾಯಧನ (ರೂ 3625) ನೀಡುವ ಯೋಜನೆಯಾಗಿದೆ. ಈ ಕಾರ್ಯಕ್ರಮವನ್ನು ವಾಣಿಜ್ಯ ಬ್ಯಾಂಕ್‌ಗಳ ಸಮನ್ವಯದೊಂದಿಗೆ ಅನುಷ್ಟಾನಗೊಳಿಸಲಾಗಿದೆ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಹೈನುಗಾರಿಕೆ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರಿ ಬ್ಯಾಂಕ್‌ಗಳಲ್ಲಿ ಸಾಲ ಪಡೆದಿರುವ ರೈತ ಮಹಿಳೆಯರು ಇದರ ಸದುಪಯೋಗ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಪಶುವೈದ್ಯ ಸಂಸ್ಥೆಗಳನ್ನು ಅಥವಾ ಸಂಬಂಧಪಟ್ಟ ತಾಲೂಕು ಪಶು ಆಸ್ಪತ್ರೆಗಳನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top