ಭಟ್ಕಳ: ಇಲ್ಲಿನ ಕೃಷಿ ಇಲಾಖೆಯು 2024-25ನೇ ಸಾಲಿನ ಕೃಷಿ ಪ್ರಶಸ್ತಿಗೆ ತಾಲೂಕಿನ ಭತ್ತ ಬೆಳೆದ ಅರ್ಹ ರೈತರಿಂದ ಅರ್ಜಿಆಹ್ವಾನಿಸಿದೆ.
ಭಟ್ಕಳ ತಾಲೂಕು ಕೃಷಿ ಇಲಾಖೆ 2024-25 ನೇ ಸಾಲಿನ ಕೃಷಿ ಪ್ರಶಸ್ತಿಗೆ ತಾಲೂಕಿನ ಭತ್ತ ಬೆಳೆದ ಅರ್ಹ ರೈತ ಮತ್ತು ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಿದೆ. ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ಪ್ರೋತ್ಸಾಹ ಹಾಗೂ ರೈತರಲ್ಲಿ ಸ್ಪರ್ಧಾ ಮನೋಭಾವ ಬೆಳೆಸಿಕೊಳ್ಳಲು ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.
ಆಸಕ್ತ ರೈತ/ರೈತ ಮಹಿಳೆಯರು ಕನಿಷ್ಟ ಒಂದು ಎಕರೆ ಭತ್ತದ ವಿಸ್ತೀರ್ಣವನ್ನು ಹೊಂದಿರಬೇಕು. ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸಲು ಮತ್ತು ಇತರೆ ಮಹಿಳೆಯರನ್ನು ಕೃಷಿಯತ್ತ ಆಕರ್ಷಿಸಲು ರೈತ ಮಹಿಳೆಯರಿಗೆ ಪ್ರತ್ಯೇಕ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ರೈತ ಮಹಿಳೆಯರು ಪ್ರತ್ಯೇಕ ಅರ್ಜಿ ಸಲ್ಲಿಸಲು ಕೋರಿದೆ.
ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಲು ಆಗಸ್ಟ 31 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕ ಶ್ರೀಧರ ಐ. ನಾಯ್ಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.