Slide
Slide
Slide
previous arrow
next arrow

ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಿಗೆ ಕರೆ

300x250 AD

ಕಾರವಾರ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಚರಿಸಲಾಗುತ್ತಿರುವ ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಗಣೇಶ ವಿಗ್ರಹಗಳನ್ನು ತಯಾರು ಮಾಡಲಾಗುತ್ತಿದ್ದು, ವಿಗ್ರಹಗಳ ತಯಾರಿಕೆಗೆ ಪರಿಸರಕ್ಕೆ ಹಾನಿಯಾಗುವಂತಹ ವಸ್ತುಗಳು, ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ನಿಂದ ತಯಾರಿಸಿದ ಗಣೇಶ ವಿಗ್ರಹಗಳು ಹಾಗೂ ಭಾರ ಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣಗಳನ್ನು ಉಪಯೋಗಿಸುವುದರಿಂದ, ನೀರಿನ ಮೂಲಗಳಾದ ಕೆರೆ, ಬಾವಿ, ನದಿ ಇತ್ಯಾದಿಗಳಲ್ಲಿ ನೀರು ಕಲುಷಿತಗೊಂಡು ಪರಿಸರ ಹಾಗೂ ನೀರು ಮಾಲಿನ್ಯವಾಗುವ ಸಂದರ್ಭಗಳು ಹೆಚ್ಚಾಗಿರುತ್ತವೆ.
ರಾಜ್ಯದ ಕೆರೆಗಳಲ್ಲಿ ಹಾಗೂ ಇತರೆ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸನಿಂದ/ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಜಲಮೂಲಗಳಲ್ಲಿ, ನದಿ, ಕಾಲುವೆ, ಪುಷ್ಕರಣಿ / ಕಲ್ಯಾಣಿ, ಬಾವಿಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಜಲ ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ 1974 ರ ಕಲಂ 45-ಎ ಅನ್ವಯ ದಂಡವನ್ನು ರೂ. 10,000 ಮತ್ತು ಜೈಲುವಾಸವನ್ನೂ ವಿಧಿಸುವ ಅವಕಾಶವಿರುತ್ತದೆ.
ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಬಣ್ಣರಹಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ಸ್ಥಳೀಯ ಸಂಸ್ಥೆಗಳು ನಿಗಧಿಪಡಿಸಿದ ಸ್ಥಳಗಳಲ್ಲಿಯೇ ಮೂರ್ತಿಗಳನ್ನು ವಿಸರ್ಜಿಸುವುದು.
ಮಣ್ಣಿನ ಗಣೇಶ ಮೂರ್ತಿಗಳ ವಿಸರ್ಜನೆ ಸಂದರ್ಭದಲ್ಲಿ ಮೊಬೈಲ್ ಟ್ಯಾಂಕ್‌ಗಳಲ್ಲಿ/ಕಲ್ಯಾಣಿಗಳ ಪಕ್ಕದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ ಪ್ರತ್ಯೇಕವಾಗಿ ವಿಲೇವಾರಿ ಮಾಡುವುದು.
ಗರಿಷ್ಠ 5 ಅಡಿ ಎತ್ತರದ ಮಣ್ಣಿನ ವಿಗ್ರಹಗಳನ್ನು ಮಾತ್ರ ತಯಾರಿಸುವುದು ಹಾಗೂ ಪ್ರತಿಸ್ಟಾಪಿಸುವುದು.
ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಪ್ರತಿ ಸಮಿತಿಯವರು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೋಲೀಸ್ ಇಲಾಖೆಯಿಂದ ನಿಬಂಧನೆಗೊಳಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು ಹಾಗೂ ನಿಯಮಾನುಸಾರ ಧ್ವನಿವರ್ಧಕಗಳನ್ನು ಬಳಸಲು ಪೋಲೀಸ್ ಇಲಾಖೆಯಿಂದ ಪೂರ್ವಾನುಮತಿ ಪಡೆಯುವುದು.
ಥರ್ಮೊಕೋಲ್, ಪ್ಲಾಸ್ಟಿಕ್ ಫ್ಲೆಕ್ಸ್ ಮತ್ತಿತರ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧಿಸುವುದು ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆಯ ತನಕ ಧ್ವನಿವರ್ಧಕಗಳ ಬಳಕೆ ನಿಷೇಧಿಸುವುದು. ಪರಿಸರ (ಸಂರಕ್ಷಣೆ) ಕಾಯ್ದೆ 1986 ರ ಅಡಿಯಲ್ಲಿ ಶಬ್ಧ ಮಾಲಿನ್ಯ (ನಿಬಂಧನೆ ಮತ್ತು ನಿಯಂತ್ರಣ) ನಿಯಮಗಳು, 2000 ಪಾಲಿಸುವುದು.
ನಿರ್ದಿಷ್ಠ ಪ್ರದೇಶದಲ್ಲಿ ಸ್ಥಾಪಿಸಲಾಗುವ ಸಾರ್ವಜನಿಕ ಗಣಪತಿಗಳನ್ನು ನಿರ್ದಿಷ್ಠ ಪಡಿಸಿದ ಕಲ್ಯಾಣಿಗಳಲ್ಲಿ ವಿಲೇವಾರಿ ಮಾಡುವುದು. ಯಾವುದೇ ಕಾರಣಕ್ಕೂ ತಿಂಗಳುಗಳವರೆಗೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮತ್ತು ವಿಲೇವಾರಿ ಮಾಡುವುದನ್ನು ನಿರ್ಬಂಧಿಸಲಾಗಿದೆ.
ಪಿಓಪಿ ಅಥವಾ ಬಣ್ಣವನ್ನು ಬಳಸಿದ ಮೂರ್ತಿಗಳ ಪ್ರತಿಪ್ಠಾಪನೆ ಸಲ್ಲದು. ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ, 1974 ಕಲಂ 33 (ಎ), ಪರಿಸರ (ಸಂರಕ್ಷಣೆ) ಕಾಯ್ದೆ 1986 ರ ಅಡಿಯಲ್ಲಿ ಶಬ್ಧ ಮಾಲಿನ್ಯ (ನಿಬಂಧನೆ ಮತ್ತು ನಿಯಂತ್ರಣ) ನಿಯಮಗಳು, 2000 ಪಾಲಿಸುವುದು.
ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಗಣೇಶ ಪೆಂಡಾಲ್‌ಗಳಲ್ಲಿ ಬಲೂನ್‌ಗಳು, ಬಲೂನ್‌ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‌ಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟೀಕ್‌ಗಳು, ಪ್ಲಾಸ್ಟಿಕ್ ಐಸ್‌ಕ್ರೀಮ್ ಸ್ಟಿಕ್‌ಗಳು, ಅಲಂಕಾರಕ್ಕಾಗಿ ಬಳಸುವ ಪಾಲಿಸ್ಟೆರೀನ್ (ಥರ್ಮೊಕೋಲ್) ಗಳನ್ನು ಬಳಸದಂತೆ ನಿಗಾವಹಿಸುವುದು.
ಎಲ್ಲಾ ರೀತಿಯ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳು (including Compostable, Bio-degradable and non-woven sacks irrespective of size and thickness) ಪ್ಲಾಸ್ಟಿಕ್ ಧ್ವಜಗಳು, ಅಂಟಿಕೊಳ್ಳುವ ಫಿಲ್ಮ್ಗಳು, ಎಲ್ಲಾ ದಪ್ಪದ ಡೈನೀಂಗ್ ಟೇಬಲ್‌ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟಾçಗಳು, ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳು, ಪ್ಲಾಸ್ಟಿಕ್ ಪ್ಲೇಟ್‌ಗಳು, ಪ್ಲಾಸ್ಟಿಕ್ ಕಪ್‌ಗಳು ಮತ್ತು ಲೋಟಗಳು, ಫೋರ್ಕಗಳು, ಪ್ಲಾಸ್ಟಿಕ್ ಚಮಚಗಳು, ಪ್ಲಾಸ್ಟಿಕ್ ಚಾಕುಗಳು, ಪ್ಲಾಸ್ಟಿಕ್ ಟ್ರೇಗಳು, ಸ್ವೀಟ್ ಬಾಕ್ಸ್ಗಳು / ಆಮಂತ್ರಣ ಪತ್ರಗಳು / ಸಿಗರೇಟ್ ಪ್ಯಾಕೆಟ್‌ಗಳ ಸುತ್ತ ಸುತ್ತುವ ಪದರ ಅಥವಾ ಪ್ಯಾಕಿಂಗ್ ಫಿಲ್ಮ್ಗಳು ಮತ್ತು ಪ್ಲಾಸ್ಟಿಕ್ ಸ್ಟಿಕರ್‌ಗಳು, ನಿಷೇಧಿತವಾಗಿರುವ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಎಲ್ಲ ನಗರಸಭೆ, ಪಾಲಿಕೆ, ಅಧಿಕಾರಿಗಳು, ಮಾರ್ಷಲ್‌ಗಳು ಹಾಗೂ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಳಸದಂತೆ ನಿಗಾವಹಿಸುವುದು.
ಪಟಾಕಿ ಮಾರಾಟ ಮಾಡುವ ಮಳಿಗೆಗಳು ಕೇವಲ ಹಸಿರು ಪಟಾಕಿಯನ್ನು ಮಾತ್ರ ಮಾರಾಟ ಮಾಡಲು ಅವಕಾಶವಿರುತ್ತದೆ. ಗುಡಿಗಾರರು / ಮೂರ್ತಿ ತಯಾರಿಕರು ಯಾವುದೇ ಕಾರಣಕ್ಕೂ ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ರಾಸಾಯನಿಕ ಬಳಸುವಂತಿಲ್ಲ ಮತ್ತು ಕೇವಲ ನೈಸರ್ಗಿಕ ಬಣ್ಣ ಬಳಸಲು ಅವಕಾಶವಿರುತ್ತದೆ ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹ, ಮಾರಾಟ ಮತ್ತು ವಿಸರ್ಜನೆಯನ್ನು ನಿಷೇಧಿಸಲಾಗಿದೆ.
ಪರಿಸರ ಮತ್ತು ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಹಾಗೂ ಜಿಲ್ಲೆಯ ಪರಿಸರ ದೃಷ್ಟಿಯಿಂದ ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಣೆಗಾಗಿ ಜಿಲ್ಲೆಯ ನಾಗರಿಕರ ಸಹಕಾರ ಹಾಗೂ ಈ ಬಗ್ಗೆ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸೂಕ್ತ ಕ್ರಮವಹಿಸುವುದು ಹಾಗೂ ಹೊರ ರಾಜ್ಯಗಳಿಂದ / ಬೇರೆ ಜಿಲ್ಲೆಗಳಿಂದ ಉತ್ತರ ಕನ್ನಡ ಜಿಲ್ಲೆಗೆ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳು ಬಾರದಂತೆ ಹಾಗೂ ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಿದ ಗಣೇಶ ಮೂರ್ತಿಗಳ ಉತ್ಪಾದನೆ, ಸಂಗ್ರಹ ಮತ್ತು ಮಾರಾಟ ಮಾಡದಂತೆ ಕ್ರಮ ವಹಿಸುವಂತೆ ಪರಿಸರ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top