Slide
Slide
Slide
previous arrow
next arrow

ಬೆಂಗಳೂರು-ಕಾರವಾರ ನಡುವೆ ವಿಶೇಷ ರೈಲು ಸೇವೆ

300x250 AD

ಕಾರವಾರ: ಪ್ರಯಾಣಿಕರ ಬೇಡಿಕೆಯ ಮೇರೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಾರವಾರ ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಸಂಚರಿಸಲಿವೆ.ಜು.26 ಮತ್ತು 28 ರಂದು ರೈಲು ಸಂಖ್ಯೆ 06567 ಎಸ್‌ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್ಪ್ರೆಸ್ ರೈಲು ಬೆಂಗಳೂರಿನಿಂದ ರಾತ್ರಿ 12.30 ಗಂಟೆಗೆ ಹೊರಟು, ಅದೇ ದಿನ ಸಂಜೆ 4 ಗಂಟೆಗೆ ಕಾರವಾರ ನಿಲ್ದಾಣ ತಲುಪಲಿದೆ.ಪುನಃ ಇದೇ ರೈಲು (06568) ಜು. 26 ಮತ್ತು 28 ರಂದು ಕಾರವಾರ ನಿಲ್ದಾಣದಿಂದ ರಾತ್ರಿ 11:30 ಗಂಟೆಗೆ ಹೊರಟು, ಮರುದಿನ ಸಂಜೆ 3.30 ಗಂಟೆಗೆ ಎಸ್‌ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ವಿಶೇಷ ರೈಲು ಬಾಣಸವಾಡಿ, ಚಿಕ್ಕಬಾಣಾವರ, ಕುಣಿಗಲ್, ಚನ್ನಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳಲ್ಲಿ ನಿಲುಗಡೆ ಇರಲಿವೆ.
ಈ ವಿಶೇಷ ರೈಲು ಎಸಿ-ಟು ಟೈಯರ್-2, ಎಸಿ-ತ್ರಿ ಟೈಯರ್-2, ಸ್ಲೀಪರ್ ಕ್ಲಾಸ್-6, ಸಾಮಾನ್ಯ ದ್ವಿತೀಯ ದರ್ಜೆ-6 ಮತ್ತು ಎಸ್‌ಎಲ್‌ಆರ್/ಡಿ -2 ಸೇರಿದಂತೆ 18 ಬೋಗಿಗಳು ಒಳಗೊಂಡಿದೆ ಎಂದು ನೈಋತ್ಯ ರೈಲ್ವೇಯ ವಿಭಾಗ ಪ್ರಕಟಣೆ ತಿಳಿಸಿದೆ.

300x250 AD
Share This
300x250 AD
300x250 AD
300x250 AD
Back to top