Slide
Slide
Slide
previous arrow
next arrow

ಲಿಂಗನಮಕ್ಕಿ ಜಲಾಶಯ ಭರ್ತಿ: ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಲು ಸೂಚನೆ

300x250 AD

ಹೊನ್ನಾವರ: ಶರಾವತಿ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟವು ದಿನೆದಿನೇ ಏರುತ್ತಿದೆ. ಜಲಾಶಯದ ಗರಿಷ್ಠ ಮಟ್ಟವು 1819.00 ಅಡಿಗಳಾಗಿದ್ದು ಜು. 24ರಂದು ಬೆಳಿಗ್ಗೆ 10 ಘಂಟೆಗೆ ಜಲಾಶಯದ ನೀರಿನ ಮಟ್ಟ 1801.20 (65,309) ಅಡಿಗಳಿಗೆ ತಲುಪಿದೆ. ಲಿಂಗನಮಕ್ಕಿ ಜಲಾಶಯದ ಒಳ ಹರಿವು ಸುಮಾರು 60,000.00 ಕ್ಯೂಸೆಕ್ಸ್ ಗಳಿಗಿಂತಲೂ ಅಧಿಕವಾಗಿದ್ದು ಇದೇ ರೀತಿಯಲ್ಲಿ ಜಲಾಶಯಕ್ಕೆ ಬರುವ ನೀರಿನ ಹರಿವು ಮುಂದುವರೆದ ಪಕ್ಷದಲ್ಲಿ ಜಲಾಶಯವು ಶೀಘ್ರದಲ್ಲಿ ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆ ಇರುವುದರಿಂದ, ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಜಲಾಶಯದಿಂದ ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು ಎಂದು ಕರ್ನಾಟಕ ವಿದ್ಯುತ್ ನಿಗಮದ ಕಾರ್ಯನಿರ್ವಾಹಕ ಅಭಿಯಂತರರಿಂದ ಮಾಹಿತಿ ತಿಳಿದುಬಂದಿದೆ.

ಆದ್ದರಿಂದ, ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಲು ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top