ದಾಂಡೇಲಿ : ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ಉತ್ತರ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ನೂತನ ಉಪಾಧ್ಯಕ್ಷರಾಗಿ ದಾಂಡೇಲಿಯ ಯುವ ಮುಖಂಡ ಹಾಗೂ ಹೋರಾಟಗಾರರಾದ ಸಾಧಿಕ್ ಮುಲ್ಲಾ ಆಯ್ಕೆಯಾಗಿದ್ದಾರೆ.
ಈ ಮೊದಲು ಸಾಧಿಕ್ ಮುಲ್ಲಾ ಅವರು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ದಾಂಡೇಲಿ ತಾಲೂಕು ಘಟಕದ ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿದ್ದರು. ಕನ್ನಡಕ್ಕಾಗಿ ಹೋರಾಟವನ್ನು ಕೈಗೆತ್ತಿಕೊಂಡಿದ್ದರು. ದಾಂಡೇಲಿಯ ಅಂಗಡಿ ಮುಗ್ಗಟ್ಟುಗಳ ಮೇಲೆ ಅಳವಡಿಸಲಾಗಿದ್ದ ಆಂಗ್ಲ ಭಾಷೆಯ ನಾಮಫಲಕ ತೆರವುಗೊಳಿಸುವ ನಿಟ್ಟಿನಲ್ಲಿ ಸಾಧಿಕ್ ಮುಲ್ಲಾ ಅವರು ಹೋರಾಟ ಕೈಗೆತ್ತಿಕೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಸಾಮಾಜಿಕ ಹೋರಾಟಗಳಲ್ಲಿಯೂ ಸಕ್ರಿಯರಾಗಿರುವ ಸಾಧಿಕ್ ಮುಲ್ಲಾ ಅವರನ್ನು ಅವರ ಜನಪರ ಹೋರಾಟ ಹಾಗೂ ಕ್ರಿಯಾಶೀಲತೆಯನ್ನು ಪರಿಗಣಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದ ಸಂಸ್ಥಾಪಕ ಅಧ್ಯಕ್ಷರಾದ ನಾರಾಯಣಗೌಡ ಅವರು ಸಂಘಟನೆಯ ಉತ್ತರಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕಗೊಳಿಸಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣದ ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕಗೊಂಡ ಸಾಧಿಕ್ ಮುಲ್ಲಾ ಅವರನ್ನು ನಗರದ ಗಣ್ಯರೇನೇಕರು ಹಾಗೂ ಕನ್ನಡಾಭಿಮಾನಿಗಳು ಅಭಿನಂದಿಸಿದ್ದಾರೆ.