ಕಾರವಾರ: ಗಾಳಿ ಮಳೆಯ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಯಾವ ಶಾಲಾ ಕಾಲೇಜುಗಳಿಗೂ ರಜೆ ನೀಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಕಛೇರಿ ಆದೇಶ ಹೊರಡಿಸಿದೆ. ಆ.5ರಂದು ಪುನಃ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳು ತೆರೆಯಲಿದ್ದು, ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಶಾಲಾ ಕಾಲೇಜುಗಳಿಗೆ ತೆರಳಬೇಕೆಂದು ತಿಳಿಸಲಾಗಿದೆ.