ದಾಂಡೇಲಿ : ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರನ್ನು ಶಾಸಕರು ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾದ ಆರ್.ವಿ.ದೇಶಪಾಂಡೆ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವರೊಂದಿಗೆ ಆರ್.ವಿ. ದೇಶಪಾಂಡೆ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಮುಂದೆ ಕೈಗೊಳ್ಳಬಹುದಾದ ಯೋಜನೆಗಳ ಕುರಿತು ಚರ್ಚೆ ನಡೆಸಿದರು.