ಯಲ್ಲಾಪುರ: ಪ್ರಸ್ತುತ ಸಂದರ್ಭದಲ್ಲಿ ಕ್ವಿಟ್ ಇಂಡಿಯಾ ಚಳುವಳಿ ಭಾರತದಲ್ಲಿ ಮತ್ತೊಮ್ಮೆ ನಡೆಯಬೇಕಾದ ಅನಿವಾರ್ಯತೆಯಿದೆ ಎಂದು ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ನಡೆಯುತ್ತಿರುವ ಹಿಂಸಾಚಾರ, ರಾಜಕೀಯ ಅಶಾಂತಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಮನೆ-ಮಠಗಳ ಮೇಲೆ ನಡೆಯುವ ದಾಳಿಗಳನ್ನು ತಡೆಯಲು ಭಾರತ ಮಧ್ಯಸ್ಥಿಕೆ ವಹಿಸಬೇಕಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಗಂಭೀರವಾಗಿ ಗಮನ ಹರಿಸಬೇಕೆಂದು ಆಗ್ರಹಿಸಿದರು.
ಕೇಂದ್ರದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್ ಜಾತ್ಯಾತೀತ ಭಾರತದ ಎಲ್ಲ ಅಧಿಕಾರ ಅನುಭವಿಸಿದವರು. ಈಗ ಹಿಂದೂ, ಮುಸ್ಲೀಂ ಸಮುದಾಯದವರು ಸೌಹಾರ್ದತೆಯಿಂದ ಬಾಳುತ್ತಿರುವ ಭಾರತದಲ್ಲಿ, ವಿವಾದಾತ್ಮಕ ಹೇಳಿಕೆಯ ಮೂಖ ಶಾಂತಿ ಕದಡುವ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿದ ರಾಮು ನಾಯ್ಕ, ಇಂತಹ ದೇಶದ್ರೋಹಿಗಳನ್ನು ದೇಶದಿಂದ ಹೊರಹಾಕಲು ಕ್ವಿಟ್ ಇಂಡಿಯಾ ಚಳುವಳಿ ಮತ್ತೊಮ್ಮೆ ನಡೆಯಬೇಕು ಎಂದಿದ್ದಾರೆ.