Slide
Slide
Slide
previous arrow
next arrow

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜಿನಾಮೆ ನೀಡಲಿ: ರೇಖಾ ಹೆಗಡೆ

300x250 AD

ಯಲ್ಲಾಪುರ: ಬಿಜೆಪಿ ಕಾರ್ಯಕರ್ತರನ್ನು ಹೀಯಾಳಿಸಿದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರ ಹೇಳಿಕೆ ಖಂಡನೀಯ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ರೇಖಾ ಹೆಗಡೆ ಹೇಳಿದರು.

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದ್ದೇವೆ ಎಂದು ಹೇಳುತ್ತ ಬಡವರಿಗೆ ಮೋಸ ಮಾಡುತ್ತಿದೆ. ಮುಡಾ, ವಾಲ್ಮೀಕಿ ನಿಗಮದ ಹಗರಣ, ಭಾಗ್ಯದ ಹೆಸರಲ್ಲಿ ಮೋಸ, ದರ ಏರಿಕೆ ಇತ್ಯಾದಿ ಕಾರಣಕ್ಕಾಗಿ ಜನರಿಗೆ ಈ ಲೂಟಿ ಸರ್ಕಾರದ ಮೇಲೆ ನಂಬಿಕೆ ಇಲ್ಲ ಎಂದು ಟೀಕಿಸಿದರು. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
     ಮೈಸೂರು ಚಲೊ ಪಾದಯಾತ್ರೆಯನ್ನು ಟೀಕಿಸಿ ಯಲ್ಲಾಪುರದ ಕಾಂಗ್ರೆಸ್ ನವರು ಹೇಳಿಕೆ ನೀಡಿದ್ದಾರೆ. ಪಕ್ಷದಿಂದ ಉಚ್ಛಾಟನೆ ಆದ ಮಹಿಳೆಯೊಬ್ಬರು ಬಿಜೆಪಿ ಬಗ್ಗೆ ಮಾತನಾಡುತ್ತಿದ್ದಾರೆ.‌ ಪ.ಪಂ ಅಧ್ಯಕ್ಷರಾಗಿ ಅಧಿಕಾರ ಅನುಭವಿಸಿದವರು ಪಕ್ಷವನ್ನು ಬದಲಾಯಿಸಿ, ಈಗ ಬಿಜೆಪಿ ಬಗ್ಗೆ ಮಾತನಾಡುತ್ತಾರೆ. ಅವರಿಗೆ ನೈತಿಕತೆ ಎಲ್ಲಿದೆ ಎಂದು ಪ್ರಶ್ನಿಸಿದರು.
    ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರುತಿ ಹೆಗಡೆ ಮಾತನಾಡಿ, ಪಾದಯಾತ್ರೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕದ ಹೇಳಿಕೆ ಖಂಡನೀಯ. ಭಾಗ್ಯ ಕೊಟ್ಟು ದಾರಿ ತಪ್ಪಿಸಿದ ಕಾಂಗ್ರೆಸ್ ಸರ್ಕಾರ, ಭ್ರಷ್ಟಾಚಾರದಲ್ಲಿ ತೊಡಗಿದೆ. ಮೊದಲು ಅವರಲ್ಲಿರುವ ತಪ್ಪುಗಳನ್ನು ಸರಿಪಡಿಸಿಕೊಂಡು, ಇನ್ನೊಬ್ಬರ ಮೇಲೆ ಗೂಬೆ ಕೂರಿಸಲಿ ಎಂದರು.
ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ ಭಟ್ಟ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪಂಚರ್ ಗ್ಯಾರಂಟಿ ಆಗಿವೆ. ಸರ್ಕಾರ ದುಡಿದು ತಿನ್ನುವ ಕೈಗಳು ಯಾಚಿಸುವಂತೆ ಮಾಡಿದೆ. ಹಿಂದುಳಿದ ವರ್ಗಗಳ ಹೆಸರಲ್ಲಿ ಅವರಿಗಾಗಿಯೇ ಇಟ್ಟ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ.‌ ಮುಡಾ ಹಗರಣದ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ಕೊಟ್ಟಿಲ್ಲ. ಸರ್ಕಾರದ ಲೋಪದೋಷಗಳನ್ನು ಜನರಿಗೆ ತಿಳಿಸಲು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಬಿಜೆಪಿ ಪಾದಯಾತ್ರೆ ನಡೆಸಿದೆ. ಇದರ ಬಗ್ಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ವ್ಯಂಗ್ಯವಾಡಿರುವುದು ದುರದೃಷ್ಟಕರ ಎಂದರು.
      ಪ.ಪಂ ಸದಸ್ಯೆ ಶ್ಯಾಮಿಲಿ ಪಾಟಣಕರ್ ಮಾತನಾಡಿ, ಬಿಜೆಪಿ ಕುರಿತು ಯಲ್ಲಾಪುರದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಹೇಳಿಕೆ ಹಾಸ್ಯಾಸ್ಪದ. ಸರ್ಕಾರ ದಲಿತರ ಹೆಸರಲ್ಲೇ ಅಧಿಕಾರಕ್ಕೆ ಬಂದು ದಲಿತರಿಗೆ ಮೋಸ ಮಾಡುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಆದರೂ ಕಾಂಗ್ರೆಸ್ ಗೆ ಬುದ್ಧಿ ಬಂದಿಲ್ಲ ಎಂದು ಟೀಕಿಸಿದರು.
   ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಹೇಮಲತಾ ಹೆಗಡೆ, ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ನಿರ್ಮಲಾ ನಾಯ್ಕ, ಸುನಂದಾ ಮರಾಠಿ ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top