ದಾಂಡೇಲಿ : ಲಂಗು ಲಗಾಮು ಇಲ್ಲದೆ ವೀಲಿಂಗ್ ಮಾಡುತ್ತಿದ್ದ ಆರು ಜನ ಯುವಕರ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡ ಘಟನೆ ಸೋಮವಾರ ಸಂಜೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೀಲಿಂಗ್ ಮಾಡುತ್ತಿದ್ದ ದ್ವಿಚಕ್ರ ವಾಹನಗಳ ಬಗ್ಗೆ ಪೊಲೀಸ್ ವೃತ್ತ ನಿರೀಕ್ಷಕರಾದ ಭೀಮಣ್ಣ ಎಂ. ಸೂರಿ ಅವರ ಮಾರ್ಗದರ್ಶನದಲ್ಲಿ ಪಿಎಸ್ಐ ಗಳಾದ ಕೃಷ್ಣೇಗೌಡ ಅರಕೇರಿ ಮತ್ತು ಜಗದೀಶ್ ಅವರ ನೇತೃತ್ವದಲ್ಲಿ ಗ್ರಾಮೀಣ ಠಾಣೆಯ ಪೊಲೀಸರು ಕಾರ್ಯಾಚರಣೆಯನ್ನು ನಡೆಸಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವೀಲಿಂಗ್ ವೈರಲ್ ಆಗಿರುವುದನ್ನು ಪರಿಗಣಿಸಿ ಸೋಮವಾರ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಆರು ಜನರ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ಮೋಟಾರ್ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.