ಕಾರವಾರ: Department of School Education & Literacy, ನವದೆಹಲಿ ರವರ ಮಾರ್ಗಸೂಚಿಯಂತೆ NMMS ಪರೀಕ್ಷೆಯನ್ನು 2024ನೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲು ಅನ್ ಲೈನ್ ಮೂಲಕ 2024ನೇ ಆಗಸ್ಟ್ 19 ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
NMMS ಪರೀಕ್ಷೆಯನ್ನು ಸರ್ಕಾರಿ, ಅನುದಾನಿತ ಮತ್ತು ಸ್ಥಳೀಯ ಸಂಸ್ಥೆ (Local body schools) ಶಾಲೆಗಳಲ್ಲಿ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನಡೆಸಲಾಗುತ್ತಿದ್ದು, ವಿದ್ಯಾರ್ಥಿ ವೇತನ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಸದರಿ ಪರೀಕ್ಷೆಯ ಆನ್‌ಲೈನ್ ಅರ್ಜಿಯು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ https://kseab.karnataka.gov.in/ ವೆಬ್ ಸೈಟ್ ನಲ್ಲಿ ಲಭ್ಯಮಾಡಲಾಗಿದೆ.
ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯ ವಿದ್ಯಾರ್ಥಿಗಳ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯವಿರುವ NMMS ಲಾಗಿನ್‌ನಲ್ಲಿ ಸಲ್ಲಿಸುವುದು. ಆನ್‌ಲೈನ್ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನಾಂಕವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್‌ಸೈಟ್‌ನಲ್ಲಿ ಲಭ್ಯ ಮಾಡಲಾಗಿರುವ ಸುತ್ತೋಲೆಯನ್ನು ಗಮನಿಸುವುದು ಹಾಗೂ ಕೆ.ಎಸ್.ಕ್ಯು.ಎ.ಎ.ಸಿ ಕಛೇರಿಯ ಸ್ಥಿರ ದೂರವಾಣಿ ಸಂಖ್ಯೆ: Tel:+9108023341615 ನ್ನು ಕಛೇರಿ ಕೆಲಸದ ಅವಧಿಯಲ್ಲಿ ಸಂಪರ್ಕಿಸಬಹುದು.
ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಹಾಗೂ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಮುಖ್ಯ ಶಿಕ್ಷಕರ ಸಭೆ ಕರೆದು ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಸಂಬಂಧ ಸೂಕ್ತ ಮಾರ್ಗದರ್ಶನ ಹಾಗೂ ವ್ಯಾಪಕ ಪ್ರಚಾರ ಮಾಡಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಲು ಅಗತ್ಯ ಕ್ರಮ ವಹಿಸಲು ತಿಳಿಸಿದೆ.