Slide
Slide
Slide
previous arrow
next arrow

ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

300x250 AD

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕಾಯಕಯೋಗಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಡಿ.ವೈ.ಎಸ್.ಪಿ ಗಿರೀಶ್ ಎಸ್.ವಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ನಾಮದಾರಿ ಸಮಾಜದ ಉಪಾಧ್ಯಕ್ಷ ಸುನೀಲ್ ಸೋನಿ ಮಾತನಾಡಿ, ನಾರಾಯಣ ಗುರುಗಳ ಆದರ್ಶ ತತ್ವಗಳನ್ನು ಅಳವಡಿಸಿಕೊಳ್ಳುವುದರಲ್ಲಿ ನಾವು ಹಿಂದಿದ್ದೇವೆ. ಮುಂದೆಯಾದರೂ ಅವರ ತತ್ವಗಳನ್ನು ಅಳವಡಿಸಿಕೊಂಡು ಅಖಂಡ ಭಾರತವನ್ನು ನಿರ್ಮಿಸೋಣ ಎಂದರು. ಕನ್ನಡ ಸಾಹಿತ್ಯ ಪರಿಷತ್ತ್ನ ತಾಲೂಕಾಧ್ಯಕ್ಷ ರಾಮಾ ನಾಯ್ಕ ಮಾತನಾಡಿ, ನಾರಾಯಣ ಗುರುಗಳು ಒಂದೇ ಜಾತಿಗೇ ಸಿಮೀತರಾದವರಲ್ಲ ಇಡೀ ಜಗತ್ತಿನ ಗುರುಗಳು ಆದರಿಂದ ಎಲ್ಲ ಸಮುದಾಯದವರು ಒಗ್ಗೂಡಿ ಗುರುಗಳ ಜಯಂತಿ ಆಚರಿಸಬೇಕು, ಇವರ ತತ್ವ, ಸಿದ್ದಾಂತಗಳ ಪರಿಪಲನೆಯಲ್ಲಿ ಎಲ್ಲರೂ ನಡೆಯೋಣ ಎಂದರು.
ಪ್ರೊ. ಎಮ್. ಜಿ. ನಾಯ್ಕ ಬ್ರಹ್ಮಶ್ರೀ ನಾರಾಯಣಗುರು ಅವರ ಕುರಿತು ಉಪನ್ಯಾಸ ನೀಡಿ, ಕೇರಳದಲ್ಲಿ ಅಂಟಿಕೊಂಡಿದ್ದ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಶ್ರಮಿಸಿದವರು, ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, “ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು,” ಎಂಬ ಸತ್ಯವಾಕ್ಯದೊಂದಿಗೆ ಎಲ್ಲರೂ ಸಮಾನರು ಎಂದು ಸಾರಿದವರು, ಮಹಿಳೆಯರಿಗೆ ಸಮಾನತೆಯ ಹಕ್ಕುನ್ನು ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಜನರಲ್ಲಿ ಸ್ವಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಶಿಕ್ಷಣಕ್ಕೆ ಮಹತ್ವ ನೀಡಿದ ಗುರುಗಳು, ಸಾವಿರಾರು ಜನರಿಗೆ ಶಿಕ್ಷಣ ಕೊಡಿಸಿದರು. ಎಲ್ಲ ವರ್ಗದ ಜನರು ಒಟ್ಟಿಗೆ ಕಲಿಯಬೇಕು ಎಂದು ಪ್ರೇರೇಪಿಸಿದರು. ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳನ್ನು ತರೆದರು. ಶೋಷಿತರಿಗಾಗಿ ದೇವಸ್ಥಾನಗಳನ್ನು ಕಟ್ಟಿ ಎಲ್ಲಾ ಜಾತಿ ಹಾಗೂ ವರ್ಗದ ಜನರಿಗೆ ಮುಕ್ತ ಪ್ರವೇಶಕ್ಕೆ ಅವಕಾಶ ಕಲ್ಪಿಸಿದರು ಎಂದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಲಾ ವೆಂ. ನಾಯ್ಕ, ನಿವೃತ್ತ ಸರ್ಕಾರಿ ಅಧಿಕಾರಿ ಎನ್.ಜಿ. ನಾಯ್ಕ, ನಾಮದಾರಿ ಸಮಾಜದ ಕಾರ್ಯದರ್ಶಿ ಮಾಧವ ನಾಯ್ಕ, ಪ.ಜಾತಿ ಮತ್ತು ಪ.ಪಂಗಡದ ಜಿಲ್ಲಾಧ್ಯಕ್ಷ ಡಿ.ಜೆ. ಮನೋಜ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತಿತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top