ಸಿದ್ದಾಪುರ: ಸಂಬಾರ ಮಂಡಳಿ, ಶಿರಸಿ ಹಾಗೂ ಸಿದ್ದಾಪುರ ತೋಟಗಾರಿಕಾ ಇಲಾಖೆಯ ಆಶ್ರಯದಲ್ಲಿ ಏಲಕ್ಕಿ ಮತ್ತು ಕಾಳುಮೆಣಸು ಬೆಳೆಯ ತರಬೇತಿ ಹಾಗೂ ಸಂಬಾರ ಮಂಡಳಿಯಲ್ಲಿ ಲಭ್ಯ ಇರುವ ಯೋಜನೆಗಳ ಮಾಹಿತಿ ಕಾರ್ಯಾಗಾರ ಆ.28ರಂದು ಬೆಳಗ್ಗೆ 10.30ಕ್ಕೆ ಸಿದ್ದಾಪುರದ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಜರುಗಲಿದೆ.
ಸಂಬಾರ ಮಂಡಳಿಯ ಸಕಲೇಶಪುರ ಪ್ರಾದೇಶಿಕ ಕಚೇರಿಯ ಉಪನಿರ್ದೇಶಕ ಎಂ.ವಾಯ್. ಹೊನ್ನೂರ ಕಾರ್ಯಕ್ರಮ ಉದ್ಘಾಟಿಸುವರು. ಸಿದ್ದಾಪುರ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಅರುಣ ಎಚ್.ಜಿ. ಅಧ್ಯಕ್ಷತೆ ವಹಿಸುವರು. ಸಂಪನ್ಮೂಲವ್ಯಕ್ತಿಗಳಾಗಿ ಸಕಲೇಶಪುರ ಸಂಬಾರ ಮಂಡಳಿಯ ಮುಖ್ಯಸ್ಥರು ಹಾಗೂ ವಿಜ್ಞಾನಿ ಡಾ.ಹರ್ಷ ಕೆ.ಎನ್. ಪಾಲ್ಗೊಳ್ಳಲಿದ್ದಾರೆ.