Slide
Slide
Slide
previous arrow
next arrow

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ (ಪಿ.ಯು.ಸಿ, ಡಿಪ್ಲೋಮಾ, ಐ.ಟಿಐ, ಪದವಿ ಮತ್ತು ಸ್ನಾತಕೋತ್ತರ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಂದ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಶುಲ್ಕ ಮರುಪಾವತಿ ಯೋಜನೆಗೆ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು, ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಉ್ಪ್ರ. 2 ಲಕ್ಷ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಗೆ ರೂ.2.50 ಲಕ್ಷ ಒಳಗಿರಬೇಕು. ವಿದ್ಯಾರ್ಥಿಗಳು ಕಡ್ಡಾಯವಾಗಿ ಬ್ಯಾಂಕ್ ಖಾತೆಗೆ ಆಧಾರ (NPCI Link) ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು ಮತ್ತು https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಎಸ್‌ಎಸ್‌ಪಿ ಅಲ್ಲಿ ಅರ್ಜಿ ಸಲ್ಲಿಸಲು ಆಕ್ಟೋಬರ್ 31 ಕೊನೆಯ ದಿನಾವಾಗಿದೆ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karanata.gov.in ಮತ್ತು ಸಹಾಯವಾಣಿ :Tel:+918277799990 ನ್ನು ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top