ಕಾರವಾರ: ಪ್ರಸಕ್ತ ಸಾಲಿನ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ ಯೋಜನೆಯಡಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು ಗುರುತಿಸಿ ಗೌರವಿಸಲು “ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗಾಗಿ” ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾ ಪೋಷಕರು ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಗಳನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಸೆಪ್ಟಂಬರ್ 16 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ:Tel:+9108382201824 ಹಾಗೂ ಮೊಬೈಲ್ ಸಂಖ್ಯೆ:Tel:+919480886551 ಕ್ಕೆ ಕಚೇರಿ ವೇಳೆಯಲ್ಲಿ ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.