Slide
Slide
Slide
previous arrow
next arrow

ಕ್ರೀಡಾಕೂಟ: ಜೆಎಂಜೆ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಸಾಧನೆ

300x250 AD

ಶಿರಸಿ: ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಬಿಸ್ಲಕೊಪ್ಪ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಜೆ.ಎಂ.ಜೆ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಸಾಧನೆಗೈದಿದ್ದಾರೆ.

ಬಾಲಕರ ವಿಭಾಗದಲ್ಲಿ ಸಂಜೀವ ನಾಯ್ಕ ಚಕ್ರ ಎಸೆತ ಪ್ರಥಮ, ಗುಂಡು ಎಸೆತ ತೃತೀಯ ಸ್ಥಾನ ಪಡೆದಿದ್ದಾನೆ. ಬಾಲಕರ ಗುಂಪು ಆಟಗಳಾದ ಥ್ರೋಬಾಲ್ ಪ್ರಥಮ, ಖೋ-ಖೋ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಬಾಲಕಿಯರ ವೈಯಕ್ತಿಕ ವಿಭಾಗದಲ್ಲಿ ನಂದಿತಾ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ, ಯೋಗಾಸನದಲ್ಲಿ ಲಕ್ಷ್ಮಿ ನಾಗೋಜಿ 5ನೇ ಸ್ಥಾನಗಳಿಸಿರುತ್ತಾರೆ. ಗುಂಪು ಆಟದಲ್ಲಿ ಥ್ರೋಬಾಲ್ ಪ್ರಥಮ, ವಾಲಿಬಾಲ್ ಪ್ರಥಮ ಸ್ಥಾನ ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾರಾದ ಸಿಸ್ಟರ ಫಿಲೋ ಜೋಸೆಫ್ ಹಾಗೂ ಶಿಕ್ಷಕ ವೃಂದ ಹರ್ಷ ವ್ಯಕ್ತ ಪಡಿಸಿ ಶುಭ ಹಾರೈಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top