ಕಾರವಾರ: ಹುಬ್ಬಳ್ಳಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ಯಲ್ಲಿ ಹೊಸದಾಗಿ ಪ್ರಾರಂಭಿಸಲಾಗಿರುವ ಒಂದು ವರ್ಷ ಅವಧಿಯ ಪೋಸ್ಟ್ ಡಿಪ್ಲೊಮಾ ಇನ್ ಮೆಕೆಟ್ರಾನಿಕ್ಸ್ ವೃತ್ತಿ ತರಬೇತಿಯ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೆಕ್ಯಾನಿಕಲ್, ಅಟೊಮೊಬೈಲ್, ಎಲೆಕ್ಟಿçಕಲ್, ಮೆಕೆಟ್ರಾನಿಕ್ಸ್ ಮತ್ತು ಎಲೆಕ್ಟಾçನಿಕ್ಸ್ ವಿಷಯಗಳಲ್ಲಿ ಡಿಪ್ಲೋಮಾ ಅಥವಾ ಇಂಜಿನಿಯರಿಂಗ್(ಬಿ.ಇ) ಉತ್ತೀರ್ಣರಾದ ಅಭ್ಯರ್ಥಿಗಳು ಈ ತರಬೇತಿ ಪಡೆಯಲು ಅರ್ಹರಿರುತ್ತಾರೆ.
ಒಂದು ವರ್ಷ ಅವಧಿಯ ಈ ಕೋರ್ಸ್ನಲ್ಲಿ ಎಲೆಕ್ಟಿçಕಲ್ ಇನ್‌ಸ್ಟಾಲೇಶನ್, ಎಲೆಕ್ಟಿçಕಲ್ ಪ್ಯಾನೆಲ್ ಡಿಸೈನ್, ಮೆಕ್ಯಾನಿಕಲ್ ಆಂಡ್ ಸಿಸ್ಟೆಮ್ ಡಿಸೈನ್, ಪಿಎಲ್‌ಸಿ, ಸ್ಕಾಡಾ, ಅಟೊಮೇಶನ್, ಸಿಎನ್‌ಸಿ ಮೈಂಟೇನನ್ಸ್, ಇಂಟರ್ನೆಟ್ ಆಫ್ ಥಿಂಗ್ಸ್ (ಐಓಟಿ), ರೋಬೋಟಿಕ್ಸ್ ಮತ್ತು ಪ್ರೊಜೆಕ್ಟ್ ಡೆವಲಪ್‌ಮೆಂಟ್ ವಿಷಯಗಳಲ್ಲಿ ಪರಿಣಿತಿ ಹೊಂದುವಷ್ಟು ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ತರಬೇತಿಯ ಕೊನೆಯಲ್ಲಿ ಕ್ಯಾಂಪಸ್ ಸಂದರ್ಶನಗಳ ಮೂಲಕ ಪ್ರತಿಷ್ಠಿತ ಕೈಗಾರಿಕೆಗಳಲ್ಲಿ ಉದ್ಯೋಗ ಅವಕಾಶ ಕಲ್ಪಿಸಲಾಗುವುದು. ಜಿಟಿಟಿಸಿ ಸಂಸ್ಥೆಯು ಉನ್ನತ ತಂತ್ರಜ್ಞಾನ ಮತ್ತು ಮೂಲಸೌಕರ್ಯಗಳನ್ನು ಅಳವಡಿಸಿಕೊಂಡಿದ್ದು ವೃತ್ತಿಪರ ತರಬೇತಿಗಳಿಗೆ ಹೆಸರುವಾಸಿಯಾಗಿದೆ.
ಪೋಸ್ಟ್ ಡಿಪ್ಲೊಮಾ ಇನ್ ಮೆಕೆಟ್ರಾನಿಕ್ಸ್ ತರಬೇತಿಯು ಸೆಪ್ಟೆಂಬರ್ 15 ರಿಂದ ಪ್ರಾರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು ಸೆ.10 ರೊಳಗಾಗಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಜಿಟಿಟಿಸಿ, ಇಂಡಸ್ಟಿçಯಲ್ ಎಸ್ಟೇಟ್, ಗೋಕುಲ ರಸ್ತೆ, ಹುಬ್ಬಳ್ಳಿ ದೂರವಾಣಿ ಸಂ.Tel:+918183860552 /Tel:+9108362333159 ಸಂಪರ್ಕಿಸುವಂತೆ ಹುಬ್ಬಳ್ಳಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಿನ್ಸಿಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.