Slide
Slide
Slide
previous arrow
next arrow

ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿಗೆ ಅವಧಿ ವಿಸ್ತರಣೆ

300x250 AD

ಕಾರವಾರ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೃಷಿ ಡಿಪ್ಲೊಮಾ ಕೋರ್ಸ್ಗೆ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಸೆ. 14 ರವರೆ ಅವಧಿಯನ್ನು ವಿಸ್ತರಿಸಲಾಗಿದೆ.
ಅರ್ಜಿಯನ್ನು http://www.uahs.edu.in ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿ ಸೆ.14 ರೊಳಗೆ ಸಲ್ಲಿಸಬಹುದು.
ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತೇರ್ಗಡೆಯಾದ, ಕನಿಷ್ಠ ಶೇ.45% (ಕನಿಷ್ಠ ಶೇ.40% ಪ.ಜಾ & ಪ.ಪಂ/ಪ್ರವರ್ಗ-1) ಅಂಕಗಳೊಂದಿಗೆ ಉತ್ತಿರ್ಣರಾದ, 19 ವರ್ಷ ವಯಸ್ಸು ಮೀರದ ಆಭ್ಯರ್ಥಿಗಳು ಅರ್ಜಿ ಅರ್ಹ ಅಭ್ಯರ್ಥಿಗಳು ಸಲ್ಲಿಸಬಹುದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ.50% ರಷ್ಟ್ಟು ಮೀಸಲಾತಿ ಇರುತ್ತದೆ.
ಎರಡು ವರ್ಷದ ಡಿಪ್ಲೋಮಾ ಕೋರ್ಸ್ನಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ, ಹೈನುವಿಜ್ಞಾನ, ರೇಷ್ಮೆ ಕೃಷಿ, ಜೇನು ಕೃಷಿ ಹೀಗೆ ಕೃಷಿಗೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ನುರಿತ ವಿಜ್ಞಾನಿಗಳಿಂದ ಭೋಧನೆ ಇರುತ್ತದೆ. ಹಾಗೂ ಕೃಷಿ ರಂಗದ ಪ್ರಾಯೋಗಿಕ ಪರಿಚಯ/ಅನುಭವ ಆಧಾರಿತ ಕಲಿಕೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ ಎಂದು ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top