Slide
Slide
Slide
previous arrow
next arrow

ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

300x250 AD

ಕಾರವಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ, ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುವುದು.
ಪ್ರಕರಣವು (ಘಟನೆ) ದಿನಾಂಕ: 01-08-2023 ರಿಂದ 31-07-2024 ರೊಳಗಡೆ ನಡೆದಿರಬೇಕು. ದಿನಾಂಕ: 01-08-2006 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ. 10000/- ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಾಗುವುದು.
ಪ್ರಸಕ್ತ ಸಾಲಿನ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಬಯಸುವವರು ನಿಗದಿಪಡಿಸಿದ ಅರ್ಜಿ ನಮೂನೆಯನ್ನು, ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಆಥವಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ.18 ರೊಳಗಾಗಿ, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಇವರಿಗೆ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top