ಕುಮಟಾ: ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ.ಕೆ. ಭಂಡಾರ್ಕರ್ಸ್ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕುಮಟಾ ತಾಲ್ಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಅಥ್ಲೆಟಿಕ್ಸ್ ವಿಭಾಗದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗುವುದರೊಂದಿಗೆ ಕಾಲೇಜಿಗೆ ಕೀರ್ತಿಯನ್ನು ತಂದುಕೊಟ್ಟಿದ್ದಾರೆ.
ಬಾಲಕಿಯರ ವಿಭಾಗದಲ್ಲಿ ಕು. ಭಾವನಾ 100ಮೀ. ಹಾಗೂ 200ಮೀ. ಓಟದಲ್ಲಿ ಪ್ರಥಮ ಸ್ಥಾನಗಳಿಸಿದ್ದಾಳೆ. ಕು. ಮಹಿಮಾ 100ಮೀ. ತೃತೀಯ ಹಾಗೂ 200ಮೀ. ಓಟದಲ್ಲಿ ದ್ವಿತೀಯ ಸ್ಥಾನ. ಕು. ಯೋಗಿತಾ ಗುಂಡು ಎಸೆತದಲ್ಲಿ ಪ್ರಥಮ, ಜಾವಲಿನ್ ಎಸೆತ ಹಾಗೂ ಚಕ್ರ ಎಸೆತದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಕು. ರಿದ್ದಿ 400ಮೀ. ಓಟದಲ್ಲಿ ದ್ವಿತೀಯ ಸ್ಥಾನ. ಕು. ವಿನಮ್ರಾ ತ್ರಿವಿದ ಜಿಗಿತದಲ್ಲಿ ಪ್ರಥಮ ಹಾಗೂ ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ. ಕು. ಅಪೇಕ್ಷಾ 800ಮೀ. ಓಟದಲ್ಲಿ ತೃತೀಯ ಸ್ಥಾನ. ಕು. ಮಾನಸಾ ಹರ್ಡಲ್ಸ್ ನಲ್ಲಿ ದ್ವಿತೀಯ ಸ್ಥಾನ. ಕು. ಉಮ್ಮೆಹಾನಿ 400ಮೀ. ತೃತೀಯ ಸ್ಥಾನ. 4×400ಮೀ. ರೀಲೆಯಲ್ಲಿ ಕು. ಅಪೇಕ್ಷಾ, ಕು. ಉಮ್ಮೆಹಾನಿ, ಕು. ರಿದ್ದಿ, ಕು. ಮಹಿಮಾ ತಂಡ ಪ್ರಥಮ ಸ್ಥಾನ ಗಳಿಸಿದ್ದಾರೆ. 4×100ಮೀ. ರೀಲೆಯಲ್ಲಿ ಕು. ಭಾವನಾ, ಕು. ಮಹಿಮಾ, ಕು. ಭೂಮಿಕಾ, ಕು. ರಶ್ಮೀ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಬಾಲಕರ ವಿಭಾಗದ ಗುಂಡು ಎಸೆತ ಹಾಗೂ ಚಕ್ರ ಎಸೆತದಲ್ಲಿ ಕು. ಗಣೇಶ ಪ್ರಥಮ ಸ್ಥಾನ ಪಡೆದಿದ್ದಾನೆ. ಕು. ಚರಣ ಮೆಸ್ತಾ ತ್ರಿವಿದ ಜಿಗಿತದಲ್ಲಿ ಪ್ರಥಮ, ಉದ್ದ ಜಿಗಿತದಲ್ಲಿ ದ್ವಿತೀಯ ಹಾಗೂ 400ಮೀ. ಓಟದಲ್ಲಿ ತೃತೀಯ ಸ್ಥಾನ ಗಳಿಸಿದ್ದಾನೆ. ಕು. ಆರ್ಯನ್ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ. 4×400ಮೀ. ರೀಲೆಯಲ್ಲಿ ಕು. ರಿತೇಶ, ಕು. ನೇಸರ, ಕು. ಚರಣ, ಕು. ರೋಶನ್ ತಂಡ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಕೊಂಕಣ ಎಜುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕರಾದ ಗುರುರಾಜ ಶೆಟ್ಟಿ, ಪ್ರಾಚಾರ್ಯರಾದ ಕಿರಣ ಭಟ್ಟ, ಉಪಪ್ರಾಚಾರ್ಯರಾದ ಸುಜಾತಾ ಹೆಗಡೆ, ಕ್ರೀಡಾ ಸಂಯೋಜಕರಾದ ದೀಪಕ ನಾಯ್ಕ, ದೀಕ್ಷಿತಾ ಕುಮಟಾಕರ, ವೇದಾ ನಾಯ್ಕ, ಸೋಮನಾಥ ಗೌಡ, ನಿತೇಶ ಮೆಸ್ತಾ, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷವನ್ನು ವ್ಯಕ್ತಪಡಿಸಿ ಮುಂದಿನ ಹಂತದ ಸ್ಪರ್ಧೆಗೆ ಶುಭಹಾರೈಸಿದರು.