ದಾಂಡೇಲಿ : ಪ್ರಾಂಶುಪಾಲರ ಸೇವಾ ಹಿರಿತನದ ಆಧಾರದ ಮೇಲೆ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳು ಕರ್ನಾಟಕ ವಿಶ್ವವಿದ್ಯಾಲಯದ ಸಿಂಡಿಕೇಟ್ ಮತ್ತು ವಿದ್ಯಾ ವಿಷಯಕ ಸದಸ್ಯರನ್ನಾಗಿ ದಾಂಡೇಲಿ ನಗರದ ಅಂಬೇವಾಡಿಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಎಂ.ಡಿ.ಒಕ್ಕುಂದ ಅವರನ್ನು ನೇಮಕ ಮಾಡಿದ್ದಾರೆ.
ಲೇಖಕರಾಗಿ, ಸಾಹಿತಿಗಳಾಗಿ, ವಾಗ್ಮಿಗಳಾಗಿ ಗುರುತಿಸಿಕೊಂಡಿರುವ ಡಾ.ಎಂ.ಡಿ.ಒಕ್ಕುಂದ ಅವರ ನೇತೃತ್ವದಲ್ಲಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯವು ರಾಜ್ಯ, ರಾಷ್ಟ್ರಮಟ್ಟದಲ್ಲಿಯೂ ಅನೇಕ ಗೌರವಕ್ಕೆ ಪಾತ್ರವಾಗಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಕ್ರಿಯಾಶೀಲ ಪ್ರಾಚಾರ್ಯರಾಗಿ ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ತಮ್ಮನ್ನು ತಾವು ಪ್ರಾಮಾಣಿಕವಾಗಿ ತೊಡಗಿಸಿಕೊಂಡಿರುವ ಡಾ.ಎಂ.ಡಿ.ಒಕ್ಕುಂದ ಅವರಿಗೆ ನಗರದ ಗಣ್ಯರನೇಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.