Slide
Slide
Slide
previous arrow
next arrow

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೆ ಸಾಮಾನ್ಯ ಜನರು ಭಿಕ್ಷೆ ಬೇಡುವಂತಾಗುತ್ತದೆ: ರೂಪಾಲಿ ನಾಯ್ಕ್

300x250 AD

ಸಿದ್ದಾಪುರ: ಬಿಜೆಪಿಯಿಂದ ನಡೆಸಲಾಗುತ್ತಿರುವ ಸದಸ್ಯತ್ವ ಅಭಿಯಾನ ಕೇವಲ ಸಂಘಟನೆಯ ಬಲವರ್ಧನೆಗೆ ಮಾತ್ರವಲ್ಲದೇ ದೇಶದ ಭದ್ರತೆಯ ದೃಷ್ಟಿಯಿಂದಲೂ ಅವಶ್ಯವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ರೂಪಾಲಿ ನಾಯ್ಕ ಹೇಳಿದರು.

ಪಟ್ಟಣದ ಬಾಲಭವನದಲ್ಲಿ ತಾಲೂಕು ಬಿಜೆಪಿ ಮಂಡಲ ಆಯೋಜಿಸಿದ್ದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಅವರು ಬುಧವಾರ ಮಾತನಾಡಿದರು.

300x250 AD

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದರೆ ಮಾತ್ರ ನಮ್ಮ ಕಾರ್ಯಕರ್ತರು ಘನತೆಯಿಂದ ಬದುಕಲು ಸಾಧ್ಯ. ಕಾರ್ಯಕರ್ತರು ಈ ಸಮಯದಲ್ಲಿ ಬಿಜೆಪಿ ಸರ್ಕಾರವನ್ನು ಪುನಃ ಆಡಳಿತಕ್ಕೆ ತರಲು ಪಣತೊಡಬೇಕು. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಆರೋಪಿಗಳಿಗೆ ಹೆಚ್ಚಿನ ಬೆಂಬಲ ಸಿಗುತ್ತಿದ್ದು, ದೇಶದ ರಕ್ಷಣೆಗೆ, ನಮ್ಮ ಸುರಕ್ಷತೆಗೆ ಮೋದಿಯವರ ಕೈಯನ್ನು ಮತ್ತಷ್ಟು ಬಲಪಡಿಸುವ ಅವಶ್ಯಕತೆ ಇದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಹೆಸರಿನಲ್ಲಿ ಇಲಾಖೆಗಳ ಖಜಾನೆಯನ್ನು ಖಾಲಿ ಮಾಡಿದೆ. ಇಂತಹ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದರೆ ಸಾಮಾನ್ಯ ಜನರು ಭಿಕ್ಷೆ ಬೇಡುವ ಪರಿಸ್ಥಿತಿ ಬಂದೊದಗುತ್ತದೆ. ಸದಸ್ಯತ್ವ ಅಭಿಯಾನದಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗಿಯಾಗಿ ನೊಂದಣಿಯಲ್ಲಿ ನಮ್ಮ ರಾಜ್ಯ ದೇಶದಲ್ಲಿಯೇ ಮುಂಚೂಣಿಯಲ್ಲಿರುವಂತೆ ಮಾಡಬೇಕುಎಂದು ಅವರು ಕರೆ ನೀಡಿದರು.
ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ .ಜಿ. ನಾಯ್ಕ ಹಣಜೀಬೈಲ್ ಪ್ರಾಸ್ತಾವಿಕ ಮಾತನಾಡಿದರು.
ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ತಿಮ್ಮಪ್ಪ ಎಂ ಕೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಪ್ರಮುಖರಾದ ಗುರುರಾಜ್ ಶಾನಭಾಗ್, ಮಾರುತಿ ನಾಯ್ಕ, ತೋಟಪ್ಪ ಇತರರಿದ್ದರು. ತಾಲೂಕು ಪ್ರಧಾನ ಕಾರ್ಯದರ್ಶಿ ಎಸ್. ಕೆ .ಮೇಸ್ತ ಕಾರ್ಯಕ್ರಮ ನಿರ್ವಹಿಸಿದರು.

Share This
300x250 AD
300x250 AD
300x250 AD
Back to top