Slide
Slide
Slide
previous arrow
next arrow

ಅಂಕದೊಂದಿಗೆ ಕೌಶಲ್ಯ, ಸಾಮಾನ್ಯ ಜ್ಞಾನ ಇದ್ದಲ್ಲಿ ಮಾತ್ರ ಯಶಸ್ಸು ಸಾಧ್ಯ: ಜಿ.ಟಿ.ಭಟ್

300x250 AD

ಶಿರಸಿ: ಎಂಇಎಸ್ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ‘ಮಂಜರಿ’ಯನ್ನು ಆಯೋಜಿಸಲಾಗಿತ್ತು. ಗಿಡಕ್ಕೆ ನೀರು ಎರೆಯುವ ಮೂಲಕ ಕಾಲೇಜಿನ ಪ್ರಾಚಾರ್ಯ ಪ್ರೊ ಜಿ.ಟಿ.ಭಟ್ ಉದ್ಘಾಟಿಸಿದರು. ಅವರು ಮಾತನಾಡಿ ಇಂದು ಶಿಕ್ಷಣದಲ್ಲಿ 99 ಪ್ರತಿಶತ ಅಂಕ ಪಡೆದರೆ ಸಾಲದು, ಅಂಕಗಳೊಂದಿಗೆ ಕೌಶಲ್ಯ, ಸಾಮಾನ್ಯ ಜ್ಞಾನ, ಚಾಕಚಕ್ಯತೆ ಇದ್ದಲ್ಲಿ ಮಾತ್ರ ಉದ್ಯೋಗ ಪ್ರಾಪ್ತಿಯಾಗುತ್ತದೆ. ಈ ನಿಟ್ಟಿನಲ್ಲಿ ನೀವೆಲ್ಲರೂ ನಿಮ್ಮ ಪದವಿ ಜೀವನದಲ್ಲಿ ಕಾರ್ಯಪ್ರವೃತ್ತರಾಗಿ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಎಲ್ಲಾ ಮಾನದಂಡಗಳನ್ನು, ವಾತಾವರಣವನ್ನು ನಾವು ಒದಗಿಸಲಿದ್ದು, ನಮ್ಮಲ್ಲಿ ನುರಿತ ಪ್ರಾಧ್ಯಾಪಕ ವೃಂದ ನಿಮ್ಮನ್ನು ಸಜ್ಜುಗೊಳಿಸಲಿದೆ. ಹೆಚ್ಚಿನ ಜ್ಞಾನ ಸಂಪಾದನೆಗೆ ಬೇಕಾಗುವ ಸಕಲ ಸೌಕರ್ಯಗಳು ನಮ್ಮ ಮಹಾವಿದ್ಯಾಲಯದಲ್ಲಿ ಲಭ್ಯವಿದ್ದು, ಅದರ ಉಪಯೋಗವನ್ನು ಪಡೆದುಕೊಳ್ಳಬೇಕು. ನಿಮ್ಮ ಶ್ರೇಯೋಭಿವೃದ್ಧಿಯ ಜವಾಬ್ದಾರಿಯನ್ನು ನಾವು ವಹಿಸಿಕೊಳ್ಳುತ್ತೇವೆ. ವಿದ್ಯಾರ್ಥಿಯಾಗಿ ನಿಮ್ಮ ಕರ್ತವ್ಯವನ್ನು ಶ್ರದ್ಧೆ, ನಿಷ್ಠೆಯಿಂದ, ನೈತಿಕತೆಯನ್ನು ಹೊಂದಿ ಪೂರೈಸಿಕೊಳ್ಳಿ ಎಂದರು.

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ವೃಂದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಂತಿಮ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜಿನ ನಡಾವಳಿಗಳನ್ನು, ಆದರ್ಶಪ್ರಾಯ ಸಂಗತಿಗಳನ್ನು ಕಾಲೇಜಿನಲ್ಲಿರುವ ವ್ಯವಸ್ಥೆಗಳ ಕುರಿತಾಗಿ ಮಾಹಿತಿಯನ್ನು ನೀಡಿದ್ದಲ್ಲದೆ, ಅವರೊಂದಿಗೆ ಸಂವಾದವನ್ನು ನಡೆಸಿದರು. ಕಾರ್ಯಕ್ರಮದ ನಂತರ ಪ್ರಥಮ ವರ್ಷದ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಅವರಿಂದಲೇ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

300x250 AD
Share This
300x250 AD
300x250 AD
300x250 AD
Back to top