Slide
Slide
Slide
previous arrow
next arrow

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಿ; ಮಂಕಾಳ ವೈದ್ಯ

300x250 AD

ಹೊನ್ನಾವರ: ಪ್ರತಿಯೊಬ್ಬರು ಸ್ವ ಪ್ರೇರಣೆಯಿಂದ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚತೆ ಮಾಡುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಹೇಳಿದರು.

ಅವರು ಭಾನುವಾರ ಹೊನ್ನಾವರದ ಮೂಡಗಣಪತಿ ಸಭಾಭವನದಲ್ಲಿ ಸ್ವಚ್ಚತೆಯೇ ಸೇವೆ ಪಾಕ್ಷಿಕ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.
ಉತ್ತರ ಕನ್ನಡ ಜಿಲ್ಲೆ ಸುಂದರ ಪ್ರಕೃತಿಯ ಸೌಂದರ್ಯವನ್ನು ಹೊಂದಿದ್ದು, ಶೇ.82 ರಷ್ಟು ಅರಣ್ಯ ಪ್ರದೇಶದಿಂದ ಕೂಡಿದೆ. ಇಂತಹ ಪ್ರಕೃತಿಯನ್ನು ಹಾಗೂ ಕಡಲ ತೀರ ಪ್ರದೇಶಗಳನ್ನು ಮಲೀನಗೊಳಿಸದೇ ಸುಂದರವಾಗಿ ಇಟ್ಟುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.
ಜಿಲ್ಲೆಯಾದ್ಯಂತ ಸೆಪ್ಟಂಬರ್ 17 ರಿಂದ ಆಯೋಜಿಸುವ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ, ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತಂತೆ ವಿವಿಧ ಚಟುವಟಿಕೆಗಳಲ್ಲಿ ಎಲ್ಲರೂ ಭಾಗವಹಿಸುವ ಮೂಲಕ ಸ್ವಚ್ಛತೆಯೇ ಸೇವಾ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಿ ಯಶಸ್ವಿಗೊಳಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಹೊನ್ನಾವರ ಪಟ್ಟಣ ಪಂಚಾಯತ್ ಅಧ್ಯಕ್ಷ ನಾಗರಾಜ ಭಟ್, ಉಪಾಧ್ಯಕ್ಷ ಸುರೇಶ ಹೊನ್ನಾವರ, ಜಿಲ್ಲಾಧಿಕಾರಿ ಕೆ. ಲಕ್ಷಿö್ಮÃ ಪ್ರಿಯಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ, ಉಪ ವಿಭಾಗಾಧಿಕಾರಿಗಳಾದ ಕನಿಷ್ಕ, ಡಾ. ನಯನಾ ಮತ್ತಿತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top