ಶಿರಸಿ: ಕಾರವಾರದ ಸಿವಿಲ್ ಸಲಹಾ ಅಭಿಯಂತರರ ಸಂಘದವರು ಸರ್.ಎಂ.ವಿಶ್ವೇಶ್ವರಯ್ಯರವರ ಜನ್ಮದಿನಾಚರಣೆಯ ನಿಮಿತ್ತ ಸರ್ಕಾರಿ ಪಾಲಿಟೆಕ್ನಿಕ್ನಲ್ಲಿ ಜಿಲ್ಲೆಯ ಡಿಪ್ಲೊಮಾ ಸಿವಿಲ್ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ಎಂ.ಇ.ಎಸ್. ಆರ್.ಎನ್. ಶೆಟ್ಟಿ ಪಾಲಿಟೆಕ್ನಿಕ್ ಸಿವಿಲ್ ವಿಭಾಗದ ವಿದ್ಯಾರ್ಥಿಗಳು ಸಾಧನೆ ಗೈದಿದ್ದಾರೆ.
ಜಿಲ್ಲೆಯ 7 ಡಿಪ್ಲೊಮಾ ಕಾಲೇಜಿನ ಒಟ್ಟು 12 ತಂಡಗಳು ಭಾಗವಹಿಸಿದ್ದವು. ಶಿರಸಿಯ ಎಂ.ಇ.ಎಸ್. ಆರ್.ಎನ್. ಶೆಟ್ಟಿ ಪಾಲಿಟೆಕ್ನಿಕ್ ಸಿವಿಲ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿನಿಯರಾದ ವೈಷ್ಣವಿ ನಾಯಕ್ ಹಾಗೂ ನೇತ್ರಾವತಿ ಎಸಕ್ಕನವರ್ ಇವರ ತಂಡವು ಪ್ರಥಮ ಸ್ಥಾನ ಗಳಿಸಿ, ನಗದು ಬಹುಮಾನ, ಕಪ್ ಹಾಗೂ ಪ್ರಶಸ್ತಿ ಪತ್ರಗಳನ್ನು ಪಡೆದಿರುತ್ತಾರೆ. ಇದೇ ಕಾಲೇಜಿನ ಇನ್ನೊಂದು ತಂಡದ ಸಿವಿಲ್ ವಿದ್ಯಾರ್ಥಿಗಳಾದ ವಿನಾಯಕ್ ಜಿ. ಮರಾಠಿ ಮತ್ತು ವಿನಾಯಕ್ ಆರ್. ಮರಾಠಿ ಇವರಿಬ್ಬರು ಸಹ ಸ್ಪರ್ಧೆಯಲ್ಲಿ ಭಾಗವಹಿಸಿ ನಗದು ಬಹುಮಾನ. ಪಾರಿತೋಷಕ ಹಾಗೂ ಪ್ರಶಸ್ತಿ ಪತ್ರಗಳನ್ನು ಪಡೆದಿದ್ದಾರೆ.
ಎಂ.ಇ.ಎಸ್. ಸಂಸ್ಥೆಯ ಅಧ್ಯಕ್ಷರು, ಪದಾಧಿಕಾರಿಗಳು, ಉಪಸಮಿತಿ ಸದಸ್ಯರು, ಪ್ರಾಚಾರ್ಯರು ಹಾಗೂ ಸಿಬ್ಬಂದಿ ವಿಜೇತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.