ಶಿರಸಿ: ಬಿಜೆಪಿ ರೈತ ಮೋರ್ಚಾ ಉತ್ತರಕನ್ನಡ ವತಿಯಿಂದ ವಿಶ್ವ ನಾಯಕ, ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ಶಿರಸಿಯ ಎಪಿಎಂಸಿ ಯಾರ್ಡ್ ಬಳಿ ಸದಸ್ಯತಾ ಅಭಿಯಾನ ನಡೆಸಿ 150ಕ್ಕೂ ಹೆಚ್ಚು ಸದಸ್ಯತ್ವ ಮಾಡಲಾಯಿತು.
ಈ ವೇಳೆ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾದ ರಮೇಶ ನಾಯ್ಕ, ಶಿರಸಿ ಗ್ರಾಮೀಣ ಮಂಡಲ ಅಧ್ಯಕ್ಷರಾದ ಶ್ರೀಮತಿ ಉಷಾ ಹೆಗಡೆ, ರೈತಮೋರ್ಚಾ ಉಪಾಧ್ಯಕ್ಷರಾದ ರಾಮಚಂದ್ರ ಜೈನ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕರಾದ ರವಿಚಂದ್ರ ಶೆಟ್ಟಿ, ರಾಜ್ಯ ರೈತಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಗಣೇಶ ಸಣ್ಣಲಿಂಗಣ್ಣನವರ,ಶಿರಸಿ ನಗರ ಪ್ರಧಾನ ಕಾರ್ಯದರ್ಶಿ ಮಾಲತೇಶ ಹಾದಿಮನಿ, ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಮಂಜುನಾಥ ನಾಯ್ಕ, ಹಾಗು ರೈತಮೋರ್ಚಾ ಪದಾಧಿಕಾರಿಗಳು ಪ್ರಮುಖರು ಉಪಸ್ಥಿತರಿದ್ದರು.