ಯಲ್ಲಾಪುರ: ಪಟ್ಟಣದ ತಾಲೂಕಾ ಕ್ರೀಡಾಂಗಣ ಕಾಳಮ್ಮನಗರದಲ್ಲಿ ಮಂಗಳವಾರ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟವನ್ನು ಕ್ರೀಡಾಜ್ಯೋತಿ ಸ್ವೀಕರಿಸಿ ಶಾಸಕ ಶಿವರಾಮ ಹೆಬ್ಬಾರ್ ಉದ್ಘಾಟಿಸಿದರು. ನಂತರ ಮಾತನಾಡಿ,’ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ಹೆಚ್ಚಳ ಸಾಧ್ಯ. ಕ್ರೀಡೆ ಮಗುವಿನ ಸರ್ವಾಂಗೀಣ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಲ್ಲ ವಿದ್ಯಾರ್ಥಿಗಳು ಕ್ರೀಡೆಯನ್ನು ಜೀವನದ ಅವಿಭಾಜ್ಯ ಅಂಗವಾಗಿ ರೂಢಿಯಲ್ಲಿಟ್ಟು ಕೊಳ್ಳಬೇಕೆಂದರು’.
ಪಪಂ ಅಧ್ಯಕ್ಷೆ ನರ್ಮದಾ ರವಿ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರಿಕೊಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ನಾಯಕ, ತಾಲೂಕಾ ಅಧ್ಯಕ್ಷ ಆರ್.ಆರ್. ಭಟ್ಟ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅಜೇಯ ನಾಯಕ,ತಾಲೂಕಾ ಅಧ್ಯಕ್ಷ ಚಂದ್ರಶೇಖರ,
ತಾಲೂಕ ದೈಹಿಕರ ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದ ನಾಯಕ, ಬಿಆರ್ಸಿಯ ಸಮನ್ವಯಾಧಿಕಾರಿ ಸಂತೋಷ್ ಜಿಗಳೂರ್ ಶಿಕ್ಷಕ ಶ್ರೀಧರ್ ಹೆಗಡೆ ಭಾಗವಹಿಸಿದ್ದರು.