ಹಳಿಯಾಳ : ಜಿಲ್ಲಾಡಳಿತ ಉತ್ತರ ಕನ್ನಡ, ತಾಲೂಕಾಡಳಿತ, ಪುರಸಭೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನಕ್ಕೆ ಶಾಸಕರಾದ ಆರ್.ವಿ. ದೇಶಪಾಂಡೆ ಮಂಗಳವಾರ ಚಾಲನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಆರ್.ವಿ. ದೇಶಪಾಂಡೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸ್ವಚ್ಛತೆ ಅತಿ ಅಗತ್ಯ. ಈ ನಿಟ್ಟಿನಲ್ಲಿ ಸ್ವಚ್ಛತೆ ಕಡೆಗೆ ಹೆಚ್ಚಿನ ಗಮನ ನೀಡಬೇಕೆಂದು ಕರೆ ನೀಡಿದರು. ಈ ಸ್ವಚ್ಛತಾ ಅಭಿಯಾನ ನಿರಂತರ ಸ್ವಚ್ಛತೆಗಾಗಿ ಜಾಗೃತಿ ಮೂಡಿಸುವ ಅಭಿಯಾನವಾಗಿದೆ ಎಂದರು.
ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ, ಸ್ವಚ್ಛತಾ ಹಿ ಸೇವಾ ಘೋಷವಾಕ್ಯದಡಿ ಹಳಿಯಾಳ ಪಟ್ಟಣದ ಯಲ್ಲಾಪುರ ನಾಕಾದಿಂದ ವಿಡಿಐಟಿ ವಿದ್ಯಾಲಯದವರೆಗೆ ನಡೆದ ಸ್ಗಚ್ಚತಾ ಅಭಿಯಾನದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಮುಖಂಡರು ಭಾಗವಹಿಸಿದ್ದರು.