Slide
Slide
Slide
previous arrow
next arrow

ಕರಾಟೆ ಚಾಂಪಿಯನ್‌ಶಿಪ್: ಬೆಳ್ಳಿ ಗೆದ್ದ ಸಾಧನಾ

300x250 AD

ಡೊಜೊ ಕರಾಟೆ ಕೇಂದ್ರ ವಿದ್ಯಾರ್ಥಿಗಳ‌ ಸಾಧನೆ

ಸಿದ್ದಾಪುರ: ಬೆಂಗಳೂರಿನ ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ನಡೆದ 15ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್’ನಲ್ಲಿ ಚಾಂಪಿಯನ್ಸ್ ಡೊಜೊ ಕರಾಟೆ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

300x250 AD

ಚಾಂಪಿಯನ್ಸ್ ಡೊಜೊ ಕರಾಟೆ ತರಬೇತಿ ಕೇಂದ್ರದ ವಿದ್ಯಾರ್ಥಿಗಳಾದ ಹರ್ಷಿತ್, ನಿಶಾಂತ್, ವಜ್ರಶ್ರೀ, ಪ್ರಾನ್ಶಿ ಹಾಗೂ ಸಾಧನಾ ಇವರು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಇವರಲ್ಲಿ ಸಾಧನಾ ಎರಡು ಬೆಳ್ಳಿ ಪದಕಗಳನ್ನು ಪಡೆದುಕೊಂಡು ಸಾಧನೆ ಮಾಡಿದ್ದಾಳೆ. ಇವರುಗಳ ಸಾಧನೆಗೆ ಉತ್ತರ ಕನ್ನಡ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಅರವಿಂದ ನಾಯ್ಕ ಹಾಗೂ ಪ್ರಧಾನ ಕಾರ್ಯದರ್ಶಿ ಆನಂದ ಕೆ ನಾಯ್ಕ ಸಂಸ್ಥೆಯ ಪದಾಧಿಕಾರಿಗಳು ಮತ್ತು ಎಲ್ಲಾ ವಿದ್ಯಾರ್ಥಿಗಳ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.

Share This
300x250 AD
300x250 AD
300x250 AD
Back to top