ಯಲ್ಲಾಪುರ: ಪಟ್ಟಣದ ಕಾಳಮ್ಮನಗರ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ನಂದೊಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಥ್ರೊಬಾಲ್ ಸ್ಪರ್ಧೆಯಲ್ಲಿ ಬಾಲಕರು ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿವೆ. ಶಿಕ್ಷಕರಾದ ಅಮಿತ್ ಚೌಹಾಣ ಹಾಗೂ ಪ್ರಶಾಂತ ತರಬೇತಿ ನೀಡಿದ್ದರು.
ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ವಿನಾಯಕ ಭಟ್ಟ, ಮುಖ್ಯಾಧ್ಯಾಪಕ ಭಾಸ್ಕರ ನಾಯ್ಕ ಹಾಗೂ, ಎಸ್.ಡಿ.ಎಂ.ಸಿ ಸದಸ್ಯರು, ಪಾಲಕರು, ಶಿಕ್ಷಕರು ಅಭಿನಂದಿಸಿದ್ದಾರೆ.
ಕ್ರೀಡಾಕೂಟ: ನಂದೊಳ್ಳಿ ಸರ್ಕಾರಿ ಶಾಲೆಯ ಸಾಧನೆ
