ಕಾರವಾರ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಸೆ.21 ರಂದು ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಸಿದ್ದಾಪುರದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತದ ಅಧಿಕಾರಿಗಳು, ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥದ ಚಾಲನೆ ಪೂರ್ವ ಸಿದ್ದತೆಗಾಗಿ ಸಮಾಲೋಚನಾ ಸಭೆಯಲ್ಲಿ ಭಾಗವಹಿಸುವರು.
ಸೆ.22 ರಂದು ಬೆಳಗ್ಗೆ 11 ಗಂಟೆಗೆ ಸಿದ್ದಾಪುರ ತಾಲೂಕಿನ ಭುವನಗಿರಿಯ ಶ್ರೀ ಭುವನೇಶ್ವರಿ ದೇವಿ ದೇವಲಾಯದಲ್ಲಿ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು, ಸಂಸದರು, ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳೊಗೂಡಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ರಥಕ್ಕೆ ಚಾಲನೆ ನೀಡಲಿದ್ದಾರೆ ಎಂದು ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.