ಕಾರವಾರ: ಪ್ರಸಕ್ತ ಸಾಲಿನಲ್ಲಿ ಡಾ. ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಗಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಯೋಜನೆ, ಮೈಕ್ರೋ ಕ್ರೇಡಿಟ್ ಪ್ರೇರಣಾ ಯೋಜನೆ, ಗಂಗಾ ಕಲ್ಯಾಣ ಯೋಜನೆ ಮತ್ತು ಭೂ ಒಡೆತನ ಯೋಜನೆಗಳಿಗೆ ಸಾಲ ಸೌಲಭ್ಯಕ್ಕಾಗಿ ಸೇವಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಪಲಾನುಭವಿಗಳು ಅಕ್ಟೋಬರ್ 10 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಸಂಬಂಧಿಸಿದ ನಿಗಮದಡಿ ಅರ್ಜಿ ಸಲ್ಲಿಸಬೇಕು, ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಸೆಂಟರ್‌ನಲ್ಲಿ ಸೇವಾಸಿಂಧು ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ (Tel:+9108382226903) ಅಥವಾ ನಿಗಮಗಳ ವೆಬ್ ಸೈಟ್ ಅಥವಾ ಕಲ್ಯಾಣ ಮಿತ್ರ ಏಕೀಕೃತ ಎಸ್.ಸಿ/ಎಸ್.ಟಿ ಸಹಾಯವಾಣಿ Tel:+919482300400 ನ್ನು ಸಂಪರ್ಕಿಸುವಂತೆ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತಿಯ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.